ಮಂಡ್ಯ: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ಪ್ರತಿಭಟನಾಕಾರರಿಗೆ ಮತ್ತೊಂದು ಶಾಕ್ ನೀಡಲಾಗಿದೆ. ಪಾದಯಾತ್ರೆಯಲ್ಲಿ ಭಾಗಿಯಾಗಿದ್ದವರ ಮೇಲೂ ಕೇಸ್ ದಾಖಲಾಗಿದೆ.
ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ವಿರೋಧಿಸಿ ಗ್ರಾಮಸ್ಥರು, ಹಿಂದೂ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಪೊಲೀಸ್ ಸಿಬ್ಬಂದಿಗಳನ್ನು ಎಳೆದಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನಾಕಾರರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಪಾದಯಾತ್ರೆ ನಡೆಸಿದವರ ವಿರುದ್ಧವೂ ಎರಡು ಕೇಸ್ ದಾಖಲಿಸಲಾಗಿದೆ.
ಹನುಮ ಧ್ವಜ ತೆರವು ಮಾಡಿ ರಾಷ್ಟ್ರಧ್ವಜ ಏರಿಸಿದ ಕ್ರಮ ಪ್ರಶ್ನಿಸಿ ಹಿಂದು ಪರ ಸಂಘಟನೆ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರು ಕೆರಗೋಡು ಗ್ರಾಮದಿಂದ ಮಂಡ್ಯವರೆಗೆ ಪಾದಯಾತ್ರೆ ನಡೆಸಿದ್ದರು. ಪಾದಯಾತ್ರೆ ನಡೆಸಿದವರ ವಿರುದ್ಧ ಮಂಡ್ಯ ಪಶ್ಚಿಮ ಠಾಣೆಯಲ್ಲಿ 2 ಪ್ರತ್ಯೇಕ ಕೇಸ್ ದಾಖಲಾಗಿದೆ.