ಮಂಡ್ಯ: ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ವಿವಾದ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಕೆರಗೋಡು ಗ್ರಾಮದಿಂದ ಮಂಡ್ಯದವರೆಗೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಬೃಹತ್ ಪಾದಯಾತ್ರೆ ಆರಂಭಿಸಿದ್ದಾರೆ.
ಕೆರಗೋಡು ಗ್ರಾಮದ ಹನುಮ ದೇವಾಲಯದಿಂದ ಆರಂಭವಾಗಿರುವ ಪಾದಯಾತ್ರೆ 14 ಕಿ.ಮೀವರೆಗೆ ಸಾಗಲಿದೆ. ಕೆರಗೋಡು ಗ್ರಾಮದ ಹನುಮ ದೇವಾಲಯದ ಮುಂಭಾಗ ಕಾರ್ಯಕರ್ತರು ಈಡುಗಾಯಿ ಒಡೆದು, ಕರ್ಪೂರ ಹಚ್ಚಿ ಪೂಜೆ ಸಲ್ಲಿಸಿದ್ದಾರೆ.
ಪಾದಯಾತ್ರೆಯಲ್ಲಿ ಕೇಸರಿ ಧ್ವಜ ಹಿಡಿದು ಸಾಗಿರುವ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಮಾಜಿ ಸಚಿವ ಜನಾರ್ಧನ ರೆಡ್ಡಿ ಕೂಡ ಈ ಪಾದಯಾತ್ರೆಯಲ್ಲಿ ಭಾಗಿಯಾಗಿರುವುದು ವಿಶೇಷ.
ಇನ್ನೊಂದೆಡೆ ಹನುಮಧ್ವಜ ವಿವಾದ ವಿಚಾರವಾಗಿ ರಾಜ್ಯ ಬಿಜೆಪಿ ನಾಯಕರು ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆಗೆ ಸಜ್ಜಾಗಿದೆ.