ಕೇರಳ ರಾಜ್ಯದಲ್ಲಿರುವ ವಿಶ್ವವಿದ್ಯಾನಿಲಯಗಳ ಕುಲಪತಿ ಸ್ಥಾನದಿಂದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ವಜಾಗೊಳಿಸುವ ಮಸೂದೆಯನ್ನು ಕೇರಳ ವಿಧಾನಸಭೆ ಅಂಗೀಕರಿಸಿದೆ.
ರಾಜ್ಯ ವಿಶ್ವವಿದ್ಯಾನಿಲಯಗಳ ಕುಲಪತಿಗಳು, ಶಿಕ್ಷಣ ಕ್ಷೇತ್ರದ ಕುರಿತಾದ ಮಸೂದೆಯನ್ನು ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲು ಈ ಹಿಂದೆ ರಾಜ್ಯ ಸಚಿವ ಸಂಪುಟ ನಿರ್ಧರಿಸಿತ್ತು. ಅಂತೆಯೆ ಮಂಡನೆಯಾದ ಮಸೂದೆ ಅಂಗೀಕಾರವಾಗಿದೆ ಎಂದು ಸ್ಪೀಕರ್ ಎಎನ್ ಶಂಸೀರ್ ಹೇಳಿದರು.
ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗವರ್ನರ್ ಅವರನ್ನು ಕುಲಪತಿ ಹುದ್ದೆಯಿಂದ ತೆಗೆದುಹಾಕುವುದನ್ನು ವಿರೋಧಿಸುವುದಿಲ್ಲ, ಆದರೆ, ಅವರನ್ನು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳು ಮತ್ತು ಮಾಜಿ ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಂದ ಆಯ್ಕೆ ಮಾಡಬೇಕು ಎಂದು ಗಂಟೆಗಳ ಚರ್ಚೆಯ ನಂತರ ಮಸೂದೆಯನ್ನು ಅಂಗೀಕರಿಸಲಾಯಿತು.
ಪ್ರತಿ ವಿಶ್ವವಿದ್ಯಾನಿಲಯಗಳಿಗೆ ವಿಭಿನ್ನ ಕುಲಪತಿಗಳು ಇರಬೇಕಾಗಿಲ್ಲ. ಆಯ್ಕೆ ಸಮಿತಿಯು ಮುಖ್ಯಮಂತ್ರಿ, ವಿರೋಧಪಕ್ಷದ ನಾಯಕ, ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡಿರಬೇಕು ಎಂದು ಹೇಳಲಾಗಿದೆ.
ಆದರೆ, ನ್ಯಾಯಾಧೀಶರು ಆಯ್ಕೆ ಸಮಿತಿಯ ಭಾಗವಾಗಲು ಸಾಧ್ಯವಿಲ್ಲ. ಸ್ಪೀಕರ್ ಉತ್ತಮ ಆಯ್ಕೆಯಾಗುತ್ತಾರೆ ಎಂದು ರಾಜ್ಯ ಕಾನೂನು ಸಚಿವ ಪಿ.ರಾಜೀವ್ ಹೇಳಿದ್ದಾರೆ.
ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳ ನೇಮಕ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಸಿಎಂ ಪಿಣರಾಯಿ ವಿಜಯನ್ ಸರ್ಕಾರದ ನಡುವಿನ ವಾಗ್ವಾದದ ನಡುವೆಯೇ ಮಸೂದೆಯನ್ನು ಸದನದಲ್ಲಿ ಮಂಡಿಸಲಾಗಿತ್ತು.