
ವ್ಯಾಗನಾರ್ ಕಾರು ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಎಸ್‌ಯುವಿ ಕಾರು ಅಂಗಡಿಯೊಳಕ್ಕೆ ನುಗ್ಗಿರುವ ಭೀಕರ ಅಪಘಾತ ಪ್ರಕರಣ ಕೇರಳದಲ್ಲಿ ನಡೆದಿದೆ. ಸಿಸಿ ಕ್ಯಾಮೆರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ.
ಎಸ್ ಯು ವಿ ಜಖಂಗೊಂಡಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಪಥನಂತಿಟ್ಟ ಜಿಲ್ಲೆಯ ಕುರಂಬಳ ಬಳಿ ಬರ್ತಿದ್ದ ಎಸ್‌ಯುವಿ ಆರಂಭದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಸಮತೋಲನ ಕಳೆದುಕೊಂಡು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯಿತು. ನಂತರ ಅಂಗಡಿಗೆ ಡಿಕ್ಕಿ ಹೊಡೆದಿದೆ.
ಇದಾದ ಕೂಡಲೇ ಸುತ್ತಮುತ್ತಲಿನ ಜನರು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ರಸ್ತೆಯ ಬದಿಯಲ್ಲಿ ಅಪಘಾತಕ್ಕೀಡಾದ ವ್ಯಾಗನಾರ್ ಮತ್ತು ದ್ವಿಚಕ್ರ ವಾಹನ ಸವಾರರಿಗೆ ಸಹಾಯ ಮಾಡಲು ಪ್ರಯತ್ನಿಸಿದರು. ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.