ನವದೆಹಲಿ: ಕೇರಳದಲ್ಲಿ ಕೊರೋನಾ ಸ್ಫೋಟವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಾರ್ನಿಂಗ್ ಮಾಡಿದೆ. ಶೇಕಡ 85 ರಷ್ಟು ಸೋಂಕಿತರಿಗೆ ಮನೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ತಿಳಿಸಿದೆ.
ಕೇರಳದಲ್ಲಿ ನಿರ್ಲಕ್ಷದಿಂದಾಗಿ ಸೋಂಕು ತೀವ್ರ ಏರಿಕೆಯಾಗಿ ಪಕ್ಕದ ರಾಜ್ಯಗಳ ಮೇಲೆ ಪರಿಣಾಮ ಬೀರುತ್ತಿದೆ. ಪಾಸಿಟಿವಿಟಿ ದರ ಶೇಕಡ 14 ರಿಂದ 19 ರಷ್ಟು ಇದ್ದು, ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರದಿಂದ ಖಡಕ್ ಸೂಚನೆ ನೀಡಲಾಗಿದೆ.
ಕೇರಳದಲ್ಲಿ ಪ್ರತಿದಿನ 30 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗುತ್ತಿದ್ದು, ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರೂ, ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ದೇಶದಲ್ಲಿ ಪ್ರತಿದಿನ ವರದಿಯಾಗುತ್ತಿರುವ ಪ್ರಕರಣಗಳಲ್ಲಿ ಶೇಕಡ 75 ರಷ್ಟು ಕೇರಳದಲ್ಲೇ ಇವೆ. ಈ ಹಿನ್ನಲೆಯಲ್ಲಿ ಕೇಂದ್ರದಿಂದ ಪರಿಣಾಮಕಾರಿ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.