
ತಿರುವನಂತಪುರಂ: ಪಕ್ಕದ ರಾಜ್ಯ ಕೇರಳದಲ್ಲಿ ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ದಿನದಿಂದ ದಿನಕ್ಕೆ ಕೋವಿಡ್ ಅಟ್ಟಹಾಸಕ್ಕೆ ಬಲಿಯಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ.
ಒಂದೇ ದಿನದಲ್ಲಿ ಕೇರಳದಲ್ಲಿ 265 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಮಹಾಮಾರಿಗೆ ಓರ್ವ ಬಲಿಯಾಗಿದ್ದಾರೆ. ಕೋವಿಡ್ ರೂಪಾಂತರಿ ವೈರಸ್ JN.1 ಆತಂಕದ ನಡುವೆಯೇ ಕೊರೊನಾ ಸೋಂಕಿನ ಆರ್ಭಟ ಹೆಚ್ಚುತ್ತಿದೆ. ಕೋವಿಡ್ ಆಕ್ಟಿವ್ ಕೇಸ್ ಶೇ.80ರಷ್ಟು ಹೆಚ್ಚಾಗಿದೆ. ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
ಇನ್ನು ತೆಲಂಗಾಣದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಈವರೆಗೆ 6 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.