ತಿರುವನಂತಪುರಂ: ಕೇರಳ ವಿಧಾನಸಭೆ ಚುನಾವಣೆ ಕಾವೇರಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಸಂಪುಟದ 7 ಮಂದಿ ಸಚಿವರಿಗೆ ಟಿಕೆಟ್ ಘೋಷಿಸಲಾಗಿದೆ. ಹಾಲಿ 33 ಮಂದಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.
83 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಶಾಸಕ ಥಾಮಸ್ ಐಸಾಕ್ ಸೇರಿದಂತೆ 33 ಹಾಲಿ ಶಾಸಕರಿಗೆ ಟಿಕೆಟ್ ಸಿಕ್ಕಿಲ್ಲ. 12 ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ. ಸಿಪಿಐ(ಎಂ) ನೇತೃತ್ವದ LDF ಮೈತ್ರಿಕೂಟ ಈ ಬಾರಿ ಹೊಸಮುಖಗಳಿಗೆ ಮಣೆ ಹಾಕಿದೆ.
ಸಿಪಿಎಂ ರಾಜ್ಯ ಕಾರ್ಯದರ್ಶಿ ವಿಜಯರಾಘವನ್ ಬಗ್ಗೆ ಮಾಹಿತಿ ನೀಡಿದ್ದು, ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಅನೇಕ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಅಭ್ಯರ್ಥಿಗಳ ಆಯ್ಕೆಯಲ್ಲಿ ಗುಂಪುಗಾರಿಕೆ ನಡೆಯುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಪಿ.ಸಿ. ಚಾಕೊ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆಳವಣಿಗೆಗಳಿಂದ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ.