
ವಿಡಿಯೋದಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಮನೆ ಕೊಚ್ಚಿಕೊಂಡು ಹೋಗಿರೋದನ್ನು ಕಾಣಬಹುದಾಗಿದೆ. ಈ ಘಟನೆಗೂ ಮುನ್ನವೇ ಮುನ್ನೆಚ್ಚರಿಕಾ ಕ್ರಮವಾಗಿ ಮನೆಯಲ್ಲಿ ಇದ್ದವರನ್ನು ಸ್ಥಳಾಂತರಿಸಲಾಗಿತ್ತು.
ಕೇರಳದಲ್ಲಿ ಭೂ ಕುಸಿತ ಹಾಗೂ ಪ್ರವಾಹದಿಂದಾಗಿ ಈವರೆಗೆ 22 ಮಂದಿ ಸಾವನ್ನಪ್ಪಿದ್ದಾರೆ. ಇಡುಕ್ಕಿಯಲ್ಲಿ ವರುಣನ ಅವಾಂತರ ಮಿತಿಮೀರಿದೆ. ಎನ್ಡಿಆರ್ಎಫ್ ತಂಡ ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ.
ಪ್ರಧಾನಿ ಮೋದಿ, ಕೇರಳ ಸಿಎಂ ಪಿಣರಾಯಿ ವಿಜಯನ್ ಈ ವಿಚಾರವಾಗಿ ಚರ್ಚೆ ನಡೆಸಿದ್ದು ಮಳೆಯಿಂದ ಉಂಟಾದ ಅವಾಂತರಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಭಾರೀ ಮಳೆಗೆ ಜೀವ ಕಳೆದುಕೊಂಡ ಕುಟುಂಬಗಳಿಗೆ ಪ್ರಧಾನಿ ಮೋದಿ ಸಾಂತ್ವಾನ ತಿಳಿಸಿದ್ದಾರೆ.