alex Certify PFI ಕಚೇರಿ ಮೇಲೆ ದಾಳಿ ವಿರೋಧಿಸಿ ಬಂದ್ ಕರೆ: KSRTC ಬಸ್ ಗಳ ಮೇಲೆ ಕಲ್ಲು ತೂರಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

PFI ಕಚೇರಿ ಮೇಲೆ ದಾಳಿ ವಿರೋಧಿಸಿ ಬಂದ್ ಕರೆ: KSRTC ಬಸ್ ಗಳ ಮೇಲೆ ಕಲ್ಲು ತೂರಾಟ

ತಿರುವನಂತಪುರಂ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಕಚೇರಿ ಮೇಲೆ ಎನ್ಐಎ ದಾಳಿ ನಡೆದ ಮರುದಿನ ಕೇರಳ ಬಂದ್ ಗೆ ಪಿಎಫ್ಐ ಕರೆ ನೀಡಿದೆ. ಪಿಎಫ್‌ಐ ಕಾರ್ಯಕರ್ತರು ಆಲುವಾದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಗಳಿಗೆ ಹಾನಿ ಮಾಡಿದ್ದಾರೆ.

ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆಂದು ಆರೋಪಿಸಿ 15 ರಾಜ್ಯಗಳಲ್ಲಿ ಪಿಎಫ್‌ಐ ಮುಖಂಡರ ಕಚೇರಿಗಳು ಮತ್ತು ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. ಎನ್‌ಐಎ ನೇತೃತ್ವದ ಬಹು ಏಜೆನ್ಸಿ ತನಿಖಾ ತಂಡಗಳು ನಡೆಸಿದ ದಾಳಿಗಳು, 106 ನಾಯಕರು ಮತ್ತು ಕಾರ್ಯಕರ್ತರ ಬಂಧನವನ್ನು ವಿರೋಧಿಸಿ ಪಿಎಫ್‌ಐ ಬಂದ್ ಗೆ ಕರೆ ನೀಡಿದೆ,

ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೇರಳ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಹರತಾಳದ ನಡುವೆಯೇ ಸರ್ಕಾರಿ ಸ್ವಾಮ್ಯದ ಕೆಎಸ್‌ಆರ್‌ಟಿಸಿ ತನ್ನ ಬಸ್ ಸೇವೆಗಳನ್ನು ಎಂದಿನಂತೆ ಮುಂದುವರಿಸುವುದಾಗಿ ಹೇಳಿದೆ. ಪಿಎಫ್‌ಐ ಕಾರ್ಯಕರ್ತರು ಅಲುವಾ ಪ್ರದೇಶದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಡೆದು ಕಲ್ಲು ತೂರಾಟ ನಡೆಸಿ ಕಿಟಕಿ ಗಾಜುಗಳನ್ನು ಒಡೆದಿದ್ದಾರೆ. ಆಲುವಾದ ಕಂಬನಿಪಾಡಿ ಬಸ್ ಡಿಪೋದಲ್ಲಿ ಈ ಘಟನೆ ನಡೆದಿದೆ. ಕೋಝಿಕ್ಕೋಡ್‌ನಲ್ಲಿ ಕಳ್ಳತನದ ಘಟನೆಗಳು ವರದಿಯಾಗಿವೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...