ಕೊಚ್ಚಿ: ಸ್ವಂತ ಅಣ್ಣನಿಂದಲೇ ಗರ್ಭಿಣಿ ಆಗಿದ್ದ ಬಾಲಕಿಯ ಗರ್ಭಪಾತಕ್ಕೆ ಕೇರಳ ಹೈಕೋರ್ಟ್ ಅನುಮತಿ ನೀಡಿದೆ. 15 ವರ್ಷದ ಅಪ್ರಾಪ್ತ ಬಾಲಕಿಯ ವೈದ್ಯಕೀಯ ಗರ್ಭಪಾತಕ್ಕೆ ಹೈಕೋರ್ಟ್ ಅಸ್ತು ಎಂದಿದೆ.
ಗರ್ಭಪಾತಕ್ಕೆ ಅನುಮತಿ ನೀಡದಿದ್ದಲ್ಲಿ ವಿವಿಧ ಸಾಮಾಜಿಕ ಮತ್ತು ವೈದ್ಯಕೀಯ ತೊಡಕು ಎದುರಾಗುವ ಸಾಧ್ಯತೆ ಇದೆ ಎಂದು ಈ ತೀರ್ಮಾನಕ್ಕೆ ಬಂದಿರುವುದಾಗಿ ಹೈಕೋರ್ಟ್ ಹೇಳಿದೆ. 7 ತಿಂಗಳ ಗರ್ಭಿಣಿಯಾಗಿರುವ ಬಾಲಕಿಯನ್ನು ಪರೀಕ್ಷೆ ಮಾಡಲು ರಚಿಸಲಾಗಿದ್ದ ವೈದ್ಯಕೀಯ ತಂಡ 32 ವಾರಗಳ ಗರ್ಭಾವಸ್ಥೆ ಮುಂದುವರೆದರೆ 15 ವರ್ಷದ ಬಾಲಕಿ ಮೇಲೆ ಸಾಮಾಜಿಕ, ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಿದ್ದ ಹಿನ್ನೆಲೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡ ಕೇರಳ ಹೈಕೋರ್ಟ್ ಬಾಲಕಿ ಗರ್ಭಪಾತಕ್ಕೆ ಅನುಮತಿ ನೀಡಿದೆ.