ಕೇರಳದಲ್ಲಿ ಮತ್ತೆ ಕೊರೊನಾ ಸೋಂಕು ವೇಗವಾಗಿ ಹೆಚ್ಚುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕೇರಳ ಸರ್ಕಾರ ಮತ್ತೊಮ್ಮೆ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಿಸಿದೆ. ಜುಲೈ 31 ಮತ್ತು ಆಗಸ್ಟ್ 1 ರಂದು ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ವಿಧಿಸಲಾಗಿದೆ. ಕೇರಳ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ, ಈ ಅವಧಿಯಲ್ಲಿ ತುರ್ತು ಸೇವೆ ಹೊರತುಪಡಿಸಿ ಎಲ್ಲ ಸೇವೆಗಳು ಬಂದ್ ಆಗಲಿವೆ.
ಕೊರೊನಾ ಎರಡನೇ ಅಲೆ ಅಬ್ಬರ ಸ್ವಲ್ಪ ಕಡಿಮೆಯಾಗಿದೆ. ಆದರೆ ಕೇರಳದಲ್ಲಿ ಕೋವಿಡ್ -19 ರ ಹೊಸ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ 2 ದಿನಗಳಿಂದ ರಾಜ್ಯದಲ್ಲಿ ಪ್ರತಿದಿನ 22 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದೆ.
24 ಗಂಟೆಯಲ್ಲಿ ಕೇರಳದಲ್ಲಿ 22056 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿನ ಪ್ರಕರಣಗಳ ಸಂಖ್ಯೆ 33 ಲಕ್ಷ 27 ಸಾವಿರ 301 ಕ್ಕೆ ತಲುಪಿದೆ. ವೈರಸ್‌ನಿಂದ ಸಾವನ್ನಪ್ಪಿದವರ ಸಂಖ್ಯೆ 16457 ಕ್ಕೆ ಏರಿದ್ದು, 24 ಗಂಟೆಯಲ್ಲಿ 131 ಜನರು ಸಾವನ್ನಪ್ಪಿದ್ದಾರೆ. ಕೇರಳದಲ್ಲಿ ಕೊರೊನಾ ಸೋಂಕಿನ ಪ್ರಮಾಣವು ಶೇಕಡಾ 11.2ರಷ್ಟಾಗಿದೆ. ಕೇರಳದಲ್ಲಿ ಕೊರೊನಾ ವೈರಸ್ ಸೋಂಕಿನ ಗ್ರಾಫ್ ಕಳೆದ 4 ವಾರಗಳಿಂದ ನಿರಂತರವಾಗಿ ಹೆಚ್ಚುತ್ತಿದೆ.