ಬೆಂಗಳೂರು: ನೆರೆಯ ಕೇರಳ ರಾಜ್ಯದಲ್ಲಿ ನಿಫಾ ವೈರಾಣುವಿನ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ನಿರ್ಧರಿಸಲಾಗಿದೆ.
ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಕಣ್ಗಾವಲು ಮತ್ತು ಅಗತ್ಯ ಪೂರ್ವಸಿದ್ಧತೆಗಳನ್ನು ಬಲಪಡಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ನೆರೆಯ ಕೇರಳದ ಪ್ರಸ್ತುತ ಪರಿಸ್ಥಿತಿ ಪರಿಗಣಿಸಿ, ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ, ಹೋಟೆಲ್, ಆಸ್ಪತ್ರೆ, ನರ್ಸಿಂಗ್ ಹೋಮ್, ಕಾರ್ಖಾನೆ ಮುಂತಾದ ಸಂಸ್ಥೆಗಳ ಆಡಳಿತ ವರ್ಗ/ಮಾಲೀಕರಿಗೆ ಕೇರಳದಿಂದ ಆಗಮಿಸುವ ತಮ್ಮ ವಿದ್ಯಾರ್ಥಿಗಳು/ಉದ್ಯೋಗಿಗಳಿಗೆ ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡಲು ತಿಳಿಸುವಂತೆ ಸೂಚಿಸಲಾಗಿದೆ.