ಬೆಂಗಳೂರು: ನೈಋತ್ಯ ಮುಂಗಾರು ಗುರುವಾರ ಕೇರಳ ಪ್ರವೇಶಿಸಿದ್ದು, ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಾಳೆ ಅಂದರೆ ಜೂನ್ 5 ರೊಳಗೆ ರಾಜ್ಯದ ಕರಾವಳಿ ಪ್ರದೇಶಕ್ಕೆ ಮುಂಗಾರು ಮಾರುತಗಳು ಎಂಟ್ರಿ ಕೊಡಲಿವೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಮುಂದಿನ 48 ಗಂಟೆಗಳ ಕಾಲದ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿರುವ ಸಾಧ್ಯತೆ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.