ಕೇರಳಕ್ಕೆ ಎಂಟ್ರಿಕೊಟ್ಟ ಮುಂಗಾರು: ಮೇಘಸ್ಫೋಟ; ಒಂದೇ ಗಂಟೆಯಲ್ಲಿ 103 ಮಿ.ಮೀ ಮಳೆ

ತಿರುವನಂತಪುರಂ: ಕೇರಳಕ್ಕೆ ಮುಂಗಾರು ಆಗಮನವಾಗಿದ್ದು, ಮೊದಲ ದಿನವೇ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ.

ಕೇರಳದ ಕೊಚ್ಚಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಕೇವಲ ಒಂದುಗಂಟೆ ಅವಧಿಯಲ್ಲಿ ಬರೋಬ್ಬರಿ 103ಮಿ.ಮೀ ಮಳೆಯಾಗಿದೆ. ಕೊಚ್ಚಿಯಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ಕೊಟ್ಟಾಯಂ ನಲ್ಲಿ ಭೂಕುಸಿತ ಸಂಭವಿಸಿದೆ.

ಕೇರಳದಾದ್ಯಂತ ಸುರಿಯುತ್ತಿರುವ ವರುಣಾರ್ಭಟಕ್ಕೆ ಈವರೆಗೆ 6 ಜನರು ಸಾವನ್ನಪ್ಪಿದ್ದಾರೆ. ತಿರುವನಂತಪುರಂನಲ್ಲಿ ಇಬ್ಬರು, ಕಾಸರಗೋಡು, ಆಲಪ್ಪುಳ, ಎರ್ನಾಕುಲಂ, ಕೋಟಯಂ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಕೊಟ್ಟಾಯಂನಲ್ಲಿ ನದಿಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಕಳಮಶ್ಯೆರಿ ಪ್ರದೇಶದಲ್ಲಿ 200ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ಆಲಪ್ಪುಳ, ಕೊಟ್ಟಾಯಂ ಹಾಗೂ ಎರ್ನಾಕುಲಂ ಮೂರು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಜೂನ್ 1ರಂದು ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲ್ಲಪ್ಪುರಂ, ಕೊಝಿಕ್ಕೊಡ್, ವಯನಾಡ್, ಕೊಣ್ಣೂರು, ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read