
ಸಾರ್ವಜನಿಕವಾಗಿ ಬಾಲಕಿಯರ ಮುಂದೆ ತನ್ನ ಮರ್ಮಾಂಗ ಪ್ರದರ್ಶಿಸಿದ ಆರೋಪದ ಮೇಲೆ ಮಲಯಾಳಂ ನಟ ಶ್ರೀಜಿತ್ ರವಿಯನ್ನು ತ್ರಿಶೂರ್ ಪೊಲೀಸರು ಬಂಧಿಸಿದ್ದಾರೆ.
ಜುಲೈ 4ರಂದು ತ್ರಿಶೂರಿನ ಎಸ್ ಎನ್ ಪಾರ್ಕಿನಲ್ಲಿ ಈ ಘಟನೆ ನಡೆದಿತ್ತು ಎನ್ನಲಾಗಿದ್ದು, ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ಆತನನ್ನು ಬಂಧನಕ್ಕೊಳಪಡಿಸಲಾಗಿದೆ.
ಶ್ರೀಜಿತ್ ರವಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತ್ರಿಶೂರ್ ಪಶ್ಚಿಮ ವಿಭಾಗದ ಪೊಲೀಸರು ತಿಳಿಸಿದ್ದು, 2016ರಲ್ಲೂ ಇಂತಹವುದೇ ಪ್ರಕರಣದಲ್ಲಿ ಈತ ಪಾಲಕ್ಕಾಡ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ.