![](https://kannadadunia.com/wp-content/uploads/2023/06/ad343a6a-3e0d-4082-a5e0-61069754808e.jpg)
ಸುಮಾರು 20 ವಿದ್ಯಾರ್ಥಿಗಳನ್ನು ಒಳಗೊಂಡ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆಯಾಗಿದ್ದು, ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೇರಳದಲ್ಲಿ ನಡೆದಿರುವ ಘಟನೆಯನ್ನ ಮೊಬೈಲ್ ನಲ್ಲಿ ಸೆರೆಹಿಡಿಯಲಾಗಿದೆ. 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಗಳದಲ್ಲಿ ತೊಡಗಿದ್ದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಗಲಾಟೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ವಾಗ್ವಾದದ ಹಿಂದಿನ ಉದ್ದೇಶವು ಇಲ್ಲಿಯವರೆಗೆ ಅಸ್ಪಷ್ಟವಾಗಿದೆ. ವೀಡಿಯೊದಲ್ಲಿ ವಿದ್ಯಾರ್ಥಿಗಳು ಒಬ್ಬರಿಗೊಬ್ಬರು ಕಪಾಳಮೋಕ್ಷ ಮತ್ತು ಗುದ್ದುವುದನ್ನು, ಒದೆಯುವುದನ್ನ ನೋಡಬಹುದು. ಆಘಾತಕಾರಿ ಸಂಗತಿಯೆಂದರೆ ಜಗಳದ ನಡುವೆ ವಿದ್ಯಾರ್ಥಿಯೊಬ್ಬ ಆಕಸ್ಮಿಕವಾಗಿ ಚರಂಡಿಗೆ ಬಿದ್ದಾಗ ಕೆಲವು ಹುಡುಗರು ಆತನ ಮೇಲೆ ನಿರ್ದಯವಾಗಿ ಹಲ್ಲೆ ಮಾಡಿದ್ದಾರೆ.