alex Certify ಕೇರಳದಲ್ಲೂ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್: ಬುರ್ಖಾ ಧರಿಸಿ ಮೊಬೈಲ್ ನಲ್ಲಿ ದೃಶ್ಯ ಸೆರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇರಳದಲ್ಲೂ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್: ಬುರ್ಖಾ ಧರಿಸಿ ಮೊಬೈಲ್ ನಲ್ಲಿ ದೃಶ್ಯ ಸೆರೆ

ಕೊಚ್ಚಿ: ಕೇರಳದಲ್ಲೂ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ಮಾಡಿದ ಘಟನೆ ನಡೆದಿದೆ. ಟಿಕ್ಕಿಯೊಬ್ಬ ಬುರ್ಖಾ ಧರಿಸಿ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ಮಾಡಿದ್ದಾನೆ.

ಕೊಚ್ಚಿಯಲ್ಲಿರುವ ಲುಲು ಮಾಲ್ ನಲ್ಲಿ ಘಟನೆ ನಡೆದಿದೆ. ಐಟಿ ಉದ್ಯೋಗಿ ಅಭಿಮನ್ಯು(23) ಎಂಬಾತ ಕೃತ್ಯವೆಸಗಿದ್ದಾನೆ. ಬಿ ಟೆಕ್ ಪದವೀಧರನಾಗಿರುವ ಆರೋಪಿ ಐಟಿ ಕಂಪನಿಯ ಉದ್ಯೋಗಿಯಾಗಿದ್ದಾನೆ.

ಮಹಿಳೆಯರ ಸೋಗಿನಲ್ಲಿ ಬುರ್ಖಾ ಧರಿಸಿದ್ದ ಆರೋಪಿ ಮಹಿಳೆಯರ ಶೌಚಾಲಯಕ್ಕೆ ತೆರಳಿ ವಿಡಿಯೋ ಚಿತ್ರೀಕರಣ ಮಾಡಿದ್ದಾನೆ. ಶೌಚಾಲಯದಲ್ಲಿ ಮೊಬೈಲ್ ಇಟ್ಟು ಹೊರ ಬಂದು ನಿಂತಿದ್ದ ಆರೋಪಿ ಅನುಮಾನಾಸ್ಪದವಾಗಿ ವರ್ತಿಸಿದ್ದಾನೆ. ಆತನನ್ನು ಕಂಡು ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ಕೊಚ್ಚಿ ಪೊಲೀಸರು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...