ಕೊಚ್ಚಿ: ದೇಶದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಇದೆ ಮೊದಲ ಬಾರಿಗೆ ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ ನೀಡಲು ಕೇರಳ ವಿಶ್ವವಿದ್ಯಾನಿಲಯ ಮಾದರಿ ನಿರ್ಧಾರ ಕೈಗೊಂಡಿದೆ.
ಕೊಚ್ಚಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಒಕ್ಕೂಟದ ಬೇಡಿಕೆಯ ನಂತರ ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ ನೀಡಲು ನಿರ್ಧಾರ ಕೈಗೊಂಡಿದೆ. ಇದರಿಂದ ವಿಶ್ವವಿದ್ಯಾಲಯದಲ್ಲಿ ಪಿ.ಹೆಚ್.ಡಿ. ಸೇರಿದಂತೆ ವಿವಿಧ ವಿಭಾಗಗಳ ನಾಲ್ಕು ಸಾವಿರಕ್ಕೂ ಅಧಿಕ ವಿದ್ಯಾರ್ಥಿನಿಯರಿಗೆ ಅನುಕೂಲವಾಗುತ್ತದೆ.
ಕೊಚ್ಚಿ ವಿಜ್ಞಾನ ಮತ್ತು ತಂತ್ರಜ್ಞಾನ ವಿವಿ ವಿದ್ಯಾರ್ಥಿನಿಯರು ಋತುಚಕ್ರದ ರಜೆ ಪಡೆಯಬಹುದಾಗಿದೆ. ಅವರ ಹಾಜರಾತಿಯಲ್ಲಿ ಒಂದು ತ್ರೈಮಾಸಿಕಕ್ಕೆ ಶೇಕಡ 2 ರಷ್ಟು ಹಾಜರಾತಿಯನ್ನು ಹೆಚ್ಚುವರಿ ನೀಡಲಾಗುವುದು. ಶೇಕಡ 75 ಕ್ಕಿಂತ ಹೆಚ್ಚು ಹಾಜರಾತಿ ಇದ್ದವರು ಸೆಮಿಸ್ಟರ್ ಪರೀಕ್ಷೆ ಬರೆಯಬಹುದು. ಕಡಿಮೆ ಇದ್ದವರು ಉಪಕುಲಪತಿಗಳಿಗೆ ಮನವಿ ಸಲ್ಲಿಸಬೇಕಿದೆ. ಮುಟ್ಟಿನ ರಜೆಗೆ ವೈದ್ಯಕೀಯ ಪ್ರಮಾಣ ಪತ್ರದ ಅಗತ್ಯವಿರುವುದಿಲ್ಲ ಎಂದು ಹೇಳಲಾಗಿದೆ.