ತಿರುವನಂತಪುರಂ: ಕರ್ನಾಟಕದ ಶಿರೂರಿನಲ್ಲಿ ಗುಡ್ಡ ಕುಸಿತದ ದುರಂತದ ಬೆನ್ನಲ್ಲೇ ಕೇರಳದ ವಯನಾಡ್ ಜಿಲ್ಲೆಯಲ್ಲಿ ಸರಣಿ ಭೂಕುಸಿತ ಸಂಭವಿಸಿದ್ದು, ಈವರೆಗೆ 15 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ವಯನಾಡ್ ನಲ್ಲಿ ಇಂದು ಮುಂಜಾನೆಯಿಂದ ಸತತವಾಗಿ ಮೂರು ಗ್ರಾಮಗಳಲ್ಲಿ ಸಾಲು ಸಾಲು ಭೂ ಕುಸಿತ ಸಂಭವಿಸಿದೆ. ಪ್ರವಾಹದಂತೆ ಹರಿದು ಬಂದ ನೀರಿನ ರಭಸಕ್ಕೆ ಮನೆಗಳು, ಅಂಗಡಿಗಳು ಕೊಚ್ಚಿ ಹೋಗಿವೆ. ಮೂರು ಗ್ರಾಮಗಳು ನೆಲಸಮವಾಗಿವೆ. ಈವರೆಗೆ 15 ಜನರು ಸಾವನ್ನಪ್ಪಿದ್ದಾರೆ. 100ಕ್ಕೂ ಹೆಚ್ಚು ಜನರು ಮಣ್ಣಿನಡಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ.
ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸಿಬ್ಬಂದಿ, ಎನ್ ಡಿ ಆರ್ ಎಫ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಈವರೆಗೆ 16 ಜನರನ್ನು ರಕ್ಷಿಸಲಾಗಿದೆ. ಭೂ ಕುಸಿತದಲ್ಲಿ 400ಕ್ಕೂ ಹೆಚ್ಚು ಕುಟುಂಬಗಳು ಅತಂತ್ರವಾಗಿವೆ.