ತಿರುವನಂತಪುರಂ: ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಸರಣಿ ಭೂ ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ವಯನಾಡ್ ಜಿಲ್ಲೆಯ ಮೆಪ್ಪಾಡಿ, ಮುಂಡಕೈ, ಚೂರಲ್ ಮಲ ಗ್ರಾಮಗಳಲ್ಲಿ ಸಾಲು ಸಾಲು ಭೂ ಕುಸಿತ ಸಂಭವಿಸಿದ್ದು, 400ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಶಾಲೆಗಳು, ಮನೆಗಳು, ಅಂಗಡಿಗಳು ನೆಲಸಮವಾಗಿವೆ. ನೀರಿನ ರಭಸಕ್ಕೆ ಕಟ್ಟಡಗಳೇ ನೀರಿನಲ್ಲಿ ಕೊಚ್ಚಿ ಹೋಗಿವೆ. ಮೂರು ಕಡೆ ಸಂಭವಿಸಿದ ಭೂ ಕುಸಿತದಲ್ಲಿ ಈವರೆಗೆ ಐವರು ಮಕ್ಕಳು ಸೇರಿ 25 ಜನರ ಮೃತದೇಹ ಪತ್ತೆಯಾಗಿದೆ.
ಮೆಪ್ಪಾಡಿ ಗ್ರಾಮವೊಂದರಲ್ಲೇ 18 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಅಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಎನ್ ಡಿ ಆರ್ ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.