ತಿರುವನಂತಪುರಂ: ಕೇರಳ ಸಚಿವಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಸಚಿವಾಲಯ ಹಾಗೂ ಆಡಳಿತ ಸಂಕೀರ್ಣದಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಂಡಿದೆ.
ಬೆಳಿಗ್ಗೆ 11 ಗಂಟೆ ವೇಳೆಗೆ ಸಚಿವಾಲಯದ ಸಂಕೀರ್ಣದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಬೆದರಿಕೆ ಕರೆ ಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸಚಿವಾಲಯದ ಆವಣದ ಒಳಗೆ, ಹೊರಗೆ ಹಾಗೂ ಸುತ್ತಮುತ್ತ ಪರಿಶೀಲನೆ ನಡೆಸಿದ್ದಾರೆ. ವಾಹನಗಳು ಹಾಗೂ ಸಮೀಪದ ಅಂಗಡಿಗಳಲ್ಲಿಯೂ ತಪಾಸಣೆ ನಡೆಸಲಾಗಿದೆ.
ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಇದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮಧ್ಯೆ ಬಾಂಬ್ ಬೆದರಿಕೆ ಹಾಕಿದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.