ತಿರುವನಂತಪುರಂ: ಕೇರಳದಲ್ಲಿ ಕೊರೊನಾ ರೂಪಾಂತರಿ ವೈರಸ್ JN.1 ಅಟ್ಟಹಾಸ ಮೆರೆಯುತ್ತಿದ್ದು, ಈವರೆಗೆ ನಾಲ್ವರು ಬಲಿಯಾಗಿದ್ದಾರೆ. ಕೊರೊನಾ ಉಪತಳಿಯಾಗಿರುವ JN.1 ವ್ಯಾಪಕವಾಗಿ ಹರಡುತ್ತಿದ್ದು, ಆತಂಕ ಸೃಷ್ಟಿಸಿದೆ.
ಕೇರಳದ ಕಣ್ಣೂರು ಜಿಲ್ಲೆ ಸೇರಿದಂತೆ ರಾಜ್ಯದೆಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದ್ದು, ಆಸ್ಪತ್ರೆಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗಿದೆ. ಇನ್ನು ಕೇರಳದಲ್ಲಿ ಕೊರೊನಾ ರೂಪಾಂತರಿ ವೈರಸ್ ಜೊತೆಗೆ ಕೋವಿಡ್ ಪ್ರಕರಣವೂ ಹೆಚ್ಚಾಗಿದ್ದು, 1,828 ಜನರಲ್ಲಿ ಕೋವಿಡ್ ಪತ್ತೆಯಾಗಿದೆ.
ಈ ಮೂಲಕ ಕೇರಳದಲ್ಲಿ ಅತಿಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಯಲ್ಲಿ ಕೇರಳದಲ್ಲಿ 115 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಇನ್ನು ಮಹಾರಾಷ್ಟ್ರ, ಗೋವಾ, ಉತರ ಪ್ರದೇಶಗಳಲ್ಲಿಯೂ ಕೊರೊನಾ ಸೋಂಕು ಹೆಚ್ಚುತ್ತಿದೆ. ಒಟ್ಟಾರೆದೇಶದಲ್ಲಿ ಕಳೆದ 9 ದಿನಗಳ ಸೋಂಕಿತರ ಸಂಖ್ಯೆ ದ್ವಿಗುಣಗೊಂಡಿದೆ.