ಮಂಗಳೂರು: ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಆಕೆಗೆ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಿಡಿದು ಪೋಷಕರು ಹಾಗೂ ಗ್ರಾಮಸ್ಥರು ಕಂಬಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕರೆನಾಡು ಪ್ರದೇಶದ ಯುವಕ ಪ್ರತಿದಿನ ಬಾಲಕಿಯೊಬ್ಬಳಿಗೆ ಕಿರುಕುಳ ನೀಡುತ್ತಿದ್ದ. ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬರುತ್ತಿದ್ದ. ಈ ಬಗ್ಗೆ ಬಾಲಕಿ ಪೋಷಕರಿಗೆ ಹೇಳಿದ್ದಳು. ಯುವಕನನ್ನು ಹಿಡಿದ ಪೋಷಕರು ಆತನನ್ನು ಕಂಬಕ್ಕೆ ಕಟ್ಟಿಹಾಕಿ ಮನ ಬಂದಂತೆ ಹೊಡೆದಿದ್ದಾರೆ. ಪೋಷಕರಿಗೆ ಸ್ಥಳೀಯರು ಸಾಥ್ ನೀಡಿದ್ದಾರೆ.
ಬಳಿಕ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಯುವಕನ ವಿರುದ್ಧ ಮುಲ್ಕಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.