ಗ್ರಾಮೀಣ ಮತ್ತು ಬುಡಕಟ್ಟು ಪ್ರದೇಶದಲ್ಲಿ ವಾಸವಾಗಿರುವವರಿಗೆ ಬೆಳಗಿನ ಉದ್ದೇಶದಿಂದ 3 ಲೀಟರ್ ಸೀಮೆಎಣ್ಣೆ ನೀಡಲಾಗುವುದು ಎಂದು ಸಚಿವ ಉಮೇಶ ಕತ್ತಿ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯ ಶಾಂತರಾಮ ಸಿದ್ಧಿ ಅವರು, ಬುಡಕಟ್ಟು ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಿದ್ದು, ಬೆಳಕಿನ ವ್ಯವಸ್ಥೆಗೆ ಕನಿಷ್ಠ 3 ಲೀಟರ್ ಸೀಮೆಎಣ್ಣೆ ವಿತರಿಸಬೇಕೆಂದು ಒತ್ತಾಯಿಸಿದ್ದಾರೆ.
ಈ ಕುರಿತಾಗಿ ಸಚಿವ ಉಮೇಶ್ ಕತ್ತಿ ಪ್ರತಿಕ್ರಿಯೆ ನೀಡಿ, ಗ್ರಾಮೀಣ ಭಾಗದ ಮತ್ತು ಬುಡಕಟ್ಟು ಪ್ರದೇಶದಲ್ಲಿ ವಾಸವಾಗಿರುವವರಿಗೆ ಮನೆ ಬೆಳಕಿನ ಉದ್ದೇಶದಿಂದ ನೀಡುತ್ತಿರುವ ಸೀಮೆಎಣ್ಣೆ ಪ್ರಮಾಣವನ್ನು ಮೂರು ಮೀಟರ್ ಗೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ
ಗ್ಯಾಸ್ ಸಿಲಿಂಡರ್ ಇಲ್ಲದ ಕುಟುಂಬಗಳಿಗೆ ಅಡುಗೆ ಮಾಡಲು ಮತ್ತು ಬೆಳಕಿನ ಉದ್ದೇಶದಿಂದ ಸೀಮೆಎಣ್ಣೆ ನೀಡಲಾಗುತ್ತಿದೆ. ರಾಜ್ಯದಲ್ಲಿ 24,87,116 ಕುಟುಂಬಗಳಿಗೆ ಸೀಮೆಎಣ್ಣೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.