![](https://kannadadunia.com/wp-content/uploads/2021/01/vidhana-soudha-750-1-jpg.jpg)
ಬೆಂಗಳೂರು : ರಾಜ್ಯದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಸಾರ್ವಜನಿಕರ ಕುಂದುಕೊರತೆಗಳನ್ನು ಅರಿಯಲು ಮೊಬೈಲ್/ವೆಬ್ ತಂತ್ರಾಂಶದ ಮೂಲಕ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಆಶಾ ಕಾರ್ಯಕರ್ತರು ಹಾಗು ಅಂಗನವಾಡಿ ಕಾರ್ಯಕರ್ತರನ್ನು ಈ ಸಮೀಕ್ಷೆಗೆ ಬಳಸಿಕೊಳ್ಳುವ ಸಂಬಂಧ ಇಂದು ಆರೋಗ್ಯ ಇಲಾಖೆ ಹಾಗು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಯಿತು.
ಗ್ಯಾರಂಟಿ ಯೋಜನೆಗಳ ಸರಿಯಾದ ಅನುಷ್ಠಾನ ಹಾಗು ಸಾರ್ವಜನಿಕರ ಕುಂದುಕೊರತೆ ಹಾಗು ಅಭಿಪ್ರಾಯ, ಸಲಹೆ ಸೂಚನೆಗಳನ್ನು ಸ್ವೀಕರಿಸುವ ಸಲುವಾಗಿ ಸರ್ಕಾರವು ಈ ಸಮೀಕ್ಷೆ ಹಮ್ಮಿಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.