ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ವ್ಯಾಪಕವಾಗಿ ಹರಡುತ್ತಿದ್ದು, ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯಲ್ಲಿ 47 ಜನರಲ್ಲಿ ಮಂಗನ ಕಾಯಿಲೆ ಹರಡಿದೆ. ಅವರಲ್ಲಿ ಐವರು ಸಾವನ್ನಪ್ಪಿದ್ದು, ಜಿಲ್ಲೆಯಾದ್ಯದ್ಯಂತ ಆತಂಕಕ್ಕೆ ಕಾರಣವಾಗಿದೆ. ಸಿದ್ದಾಪುರಕ್ಕೆ ಸೀಮಿತವಾಗಿದ್ದ ಮಂಗನ ಕಾಯಿಲೆ ಸೋಂಕು ಈಗ ಅಂಕೋಲಾ ತಾಲೂಕಿಗೂ ವ್ಯಾಪಿಸಿದೆ.
ಮಂಗನ ಕಾಯಿಲೆಗೆ ಸೂಕ್ತ ಔಷಧಿ ಇಲ್ಲದ ಹಿನ್ನೆಲೆಯಲ್ಲಿ ಆರೋಗ್ಯ ಇಲಖೆ ಜನರೇ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಸೂಚಿಸುತ್ತಿದೆ.