ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ಯಾವುದೇ ವರ್ಗಾವಣೆ ದಂಧೆ ನಡೆಯುತ್ತಿಲ್ಲ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಇಂಧನ ಸಚಿವ ಕೆ ಜೆ ಜಾರ್ಜ್ ‘ಸರ್ಕಾರದಲ್ಲಿ ಯಾವುದೇ ವರ್ಗಾವಣೆ ದಂಧೆ ನಡೆಯುತ್ತಿಲ್ಲ, ಹೆಚ್ ಡಿ ಕುಮಾರಸ್ವಾಮಿ ಬರೀ ಕೇವಲ ಆರೋಪ ಮಾಡ್ತಿದ್ದಾರೆ , ಕೇವಲ ಆರೋಪ ಮಾಡುವುದಲ್ಲ, ಸೂಕ್ತ ದಾಖಲೆ ನೀಡಬೇಕು ಎಂದು ಕೆ ಜೆ ಜಾರ್ಜ್ ಹೇಳಿದ್ದಾರೆ. ನಮ್ಮ ಸರ್ಕಾರದಲ್ಲಿ ಯಾವುದೇ ವರ್ಗಾವಣೆ ದಂಧೆ ನಡೆದಿಲ್ಲ, ನಡೆಯುವುದೂ ಇಲ್ಲ. ಸುಖಾ ಸುಮ್ಮನೆ ಆರೋಪ ಮಾಡಬಾರದು. ಹೆಚ್ ಡಿ ಕುಮಾರಸ್ವಾಮಿ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಕೆ ಜೆ ಜಾರ್ಜ್ ಹೇಳಿದ್ದಾರೆ.
ಟ್ವೀಟ್ ಬಾಂಬ್ ಸಿಡಿಸಿದ ಜೆಡಿಎಸ್
ವರ್ಗಾವಣೆ ಆದೇಶದ ದಿನವೇ ಅದು ಕೈಗೆ ಸಿಗಬೇಕಾದರೆ #YstTax ಕಡ್ಡಾಯ. ಇಲ್ಲವಾದರೆ ತಪ್ಪಿದ್ದಲ್ಲ ಅನ್ಯಾಯ!! ಕೈ ಬೆಚ್ಚಗೆ ಆಗದಿದ್ದರೆ ವರ್ಗಾವಣೆ ಆದೇಶದ ಪ್ರತಿ ನೇರ ಕಸದ ಬುಟ್ಟಿಗೆ ಹೋಗುವುದು ಗ್ಯಾರಂಟಿ ಎಂದು ಜೆಡಿಎಸ್ ಸರಣಿ ಟ್ವೀಟ್ ಮೂಲಕ ಹೊಸ ಬಾಂಬ್ ಸಿಡಿಸಿದೆ.
ಮುಖ್ಯಮಂತ್ರಿಗಳಿಂದ ನಡೆಯುವ ವರ್ಗಾವಣೆ, ಶಿಫಾರಸ್ಸಿನ ಟಿಪ್ಪಣಿಗಳ ಬಿಕರಿಗೆ ಇಲ್ಲಿದೆ ಇನ್ನೊಂದು ಸಾಕ್ಷ್ಯ, ಅಲ್ಲಿನವರಿಗೆ ಇದೇ ಪಂಚಭಕ್ಷ್ಯ. #YstTax#CashForPostingCMO ಅಂದರೆ @CMofKarnatakaಎಂದುಕೊಂಡಿದ್ದ ಕನ್ನಡಿಗರಿಗೆ ಅದು ಈಗ Corruption Management Office ಆಗಿದೆ ಎನ್ನುವುದು ಅರ್ಥವಾಗಿದೆ. ಕಾರಣವಿಷ್ಟೇ, ಅಲ್ಲಿ #YstTax ಪಾವತಿ ಆಗದಿದ್ದರೆ ವರ್ಗಾವಣೆ ಆದೇಶಗಳೆಲ್ಲ ಮುಲಾಜಿಲ್ಲದೆ ಕಸದ ಬುಟ್ಟಿ ಸೇರುತ್ತವೆ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.