ಬೆಂಗಳೂರು: ‘ಕೆಜಿಎಫ್ 2’ ಹಾಡಿನ ಕಾಪಿ ರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಎಫ್ಐಆರ್ ಗೆ ತಡೆಯಾಜ್ಞೆ ವಿಸ್ತರಣೆ ಮಾಡಲಾಗಿದೆ.
ಹೈಕೋರ್ಟ್ ಏಕ ಸದಸ್ಯ ಪೀಠದಿಂದ ತಡೆಯಾಜ್ಞೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಕಾಂಗ್ರೆಸ್ ಪಕ್ಷದಿಂದ ‘ಕೆಜಿಎಫ್ 2’ ಹಾಡಿನ ದುರ್ಬಳಕೆ ಆರೋಪ ಕೇಳಿ ಬಂದಿತ್ತು. ಎಂಆರ್‌ಟಿ ಮ್ಯೂಸಿಕ್ ನಿಂದ ದೂರು ದಾಖಲಿಸಲಾಗಿತ್ತು. ಭಾರತ್ ಜೋಡೋ ಯಾತ್ರೆಯ ವೇಳೆ ‘ಕೆಜಿಎಫ್ 2’ ಹಾಡಿನ ಬಳಕೆ ಆರೋಪ ಕೇಳಿ ಬಂದಿತ್ತು. ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮೊದಲಾದವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು