alex Certify KGF Chapter 2: ಬೆಂಗಳೂರಿನ ಕೆಂಗೇರಿಯ ವೆಂಕಟೇಶ ಚಿತ್ರಮಂದಿರಲ್ಲಿ ಲೇಡಿಸ್‌ ಸ್ಪೆಷಲ್‌ ಶೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KGF Chapter 2: ಬೆಂಗಳೂರಿನ ಕೆಂಗೇರಿಯ ವೆಂಕಟೇಶ ಚಿತ್ರಮಂದಿರಲ್ಲಿ ಲೇಡಿಸ್‌ ಸ್ಪೆಷಲ್‌ ಶೋ

ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಕೆಜಿಎಫ್‌ ಚಾಪ್ಟರ್‌ 2 ಇಂದು ವಿಶ್ವದಾದ್ಯಂತ 10 ಸಾವಿರಕ್ಕೂ ಅಧಿಕ ಸ್ಕೀನ್‌ ಗಳಲ್ಲಿ ತೆರೆ ಕಂಡಿದೆ. ರಾಕಿ ಭಾಯ್‌ ಅಬ್ಬರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಭಾರತವೊಂದರಲ್ಲೇ 6 ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಈ ಚಿತ್ರ ತೆರೆ ಕಂಡಿದ್ದು, ಪ್ರೇಕ್ಷಕರು ಮಧ್ಯರಾತ್ರಿಯಿಂದಲೇ ಮುಗಿಬಿದ್ದು ಚಿತ್ರವನ್ನು ವೀಕ್ಷಿಸುತ್ತಿದ್ದಾರೆ.

ರಾಜ್ಯದಲ್ಲೂ ಕೆಜಿಎಫ್‌ – 2 ಹವಾ ಭರ್ಜರಿಯಾಗಿದ್ದು, ಅಭಿಮಾನಿಗಳು ಚಿತ್ರಮಂದಿರದ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಜೊತೆಗೆ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಕಟೌಟ್‌ ಗೆ ಕ್ಷೀರಾಭಿಷೇಕ ಮಾಡುವ ಮೂಲಕ ತಮ್ಮ ಅಭಿಮಾನ ಹಂಚಿಕೊಂಡಿದ್ದಾರೆ.

ಇನ್ನೂ ಬೆಂಗಳೂರಿನ ಕೆಂಗೇರಿಯ ವೆಂಕಟೇಶ ಚಿತ್ರಮಂದಿರದಲ್ಲಿ ಲೇಡಿಸ್‌ ಸ್ಪೆಷಲ್‌ ಶೋ ನಡೆಸಿದ್ದು, ಈ ವೇಳೆ ಚಿತ್ರಮಂದಿರದಲ್ಲಿ ಸಂಪೂರ್ಣವಾಗಿ ಮಹಿಳೆಯರೇ ಸಿನಿಮಾ ವೀಕ್ಷಿಸಿದ್ದಾರೆ. ಅಲ್ಲದೇ ಹಾಡು ಬಂದ ಸಂದರ್ಭದಲ್ಲಿ ತಾವೂ ಕೂಡಾ ಹೆಜ್ಜೆ ಹಾಕಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್, ಸಂಜಯ್ ದತ್, ರವೀನಾ ಟಂಡನ್ ಮೊದಲಾದವರು ನಟಿಸಿದ್ದಾರೆ. ವಿಜಯ್ ಕಿರಂಗದೂರು ತಮ್ಮ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...