ಬೆಂಗಳೂರು: ಕೆ ಜಿ ಎಫ್ ತಾತ ಎಂದೇ ಖ್ಯಾತಿ ಪಡೆದಿರುವ ಕೃಷ್ಣ ಜಿ ರಾವ್ ತೀವ್ರ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
72 ವರ್ಷದ ಕೃಷ್ಣ ಜಿ ರಾವ್, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಕೆಜಿಎಫ್ ಹಾಗೂ ಕೆ ಜಿ ಎಫ್-2 ಸಿನಿಮಾಗಳಲ್ಲಿ ಅಭಿನಯಿಸಿ ಜನಪ್ರಿಯತೆ ಪಡೆದಿದ್ದರು.
ಶಂಕರ್ ನಾಗ್ ಕಾಲದಿಂದಲೂ ಕೃಷ್ಣ ಜಿ ರಾವ್ ಸಿನಿಮಾ ರಂಗದಲ್ಲಿ ಗುರುತಿಸಿಕೊಂಡಿದ್ದು, ಹಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಕೃಷ್ಣ ಜಿ ರಾವ್ ಬೆಂಗಳೂರಿನ ಗಿರಿನಗರ ಬಳಿಯ ಸೀತಾಸರ್ಕಲ್ ನಲ್ಲಿರುವ ವಿನಾಯಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.