ಕೋಲಾರ: ದಲಿತ ಮುಖ್ಯಮಂತ್ರಿ ಮಾಡುವ ವಿಚಾರ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧವಾಗಿರುತ್ತೇನೆ. ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಲಿತ ಸಿಎಂ ಬಗ್ಗೆ ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಸೂಚನೆ ನೀಡಿದ್ದು, ನಾನು ಯಾವುದೇ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಎಲ್ಲಾ ಸಚಿವರು, ಶಾಸಕರು ಒಟ್ಟಾಗಿ ನಿಂತು ಅವರ ಕೈ ಬಲಪಡಿಸಿದ್ದು, ಬಿಜೆಪಿ ಹುನ್ನಾರಕ್ಕೆ ತಿರುಗೇಟು ನೀಡುವ ಶಕ್ತಿ ನೀಡಿದ್ದೇವೆ. ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಯುವಂತಹ ಪರಿಸ್ಥಿತಿ ಎಂದಿಗೂ ಬರುವುದಿಲ್ಲ. ಒಂದು ವೇಳೆ ಬಂದರೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಹೇಳಿದ್ದಾರೆ.