ಬೆಂಗಳೂರು: ಸಿಎಂ ಅಭ್ಯರ್ಥಿ ಹೇಳಿಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಿರಿಯ ನಾಯಕರ ಸಭೆ ಕರೆಯಲಿ. ಆಗ ಸಿಎಂ ಅಭ್ಯರ್ಥಿ ಹೇಳಿಕೆ ಬಗ್ಗೆ ಚರ್ಚಿಸಿ ಗೊಂದಲ ಬಗೆಹರಿಸಬಹುದಾಗಿದೆ ಎಂದು ಮಾಜಿ ಸಂಸದ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.
ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಪ್ರಶ್ನೆ ಈಗ ಅಪ್ರಸ್ತುತವಾಗಿದ್ದು, ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೂಚನೆ ನೀಡಿ ಈ ರೀತಿ ಹೇಳಿಕೆಗಳನ್ನು ನೀಡಬಾರದು ಎಂದು ತಿಳಿಸಿದ್ದಾರೆ. ಹೈಕಮಾಂಡ್ ಸೂಚನೆಯನ್ನು ಭೀಮಾನಾಯಕ್, ಗಣೇಶ್ ಉಲ್ಲಂಘನೆ ಮಾಡಿದ ವಿಚಾರ ಗಮನಕ್ಕೆ ಬಂದಿಲ್ಲ. ಹೀಗಾಗಿ, ನಾಳೆಯಿಂದ ಅಂತಹ ಹೇಳಿಕೆ ಕೊಡುವುದಿಲ್ಲ. ಸಿದ್ದರಾಮಯ್ಯನವರು ಆ ರೀತಿ ಹೇಳಿಕೆ ನೀಡಿಲ್ಲ, ಉಳಿದವರು ಸಿಎಂ ಬಗ್ಗೆ ಹೇಳುತ್ತಿದ್ದಾರೆ. ಇಂತಹ ಬೆಳವಣಿಗೆ ಪಕ್ಷಕ್ಕೆ ಒಳ್ಳೆಯದಲ್ಲ ಎಂದು ಮುನಿಯಪ್ಪ ತಿಳಿಸಿದ್ದಾರೆ.