ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಸೆಪ್ಟೆಂಬರ್ ನಲ್ಲಿಯೂ 10 ಕೆಜಿ ಅಕ್ಕಿ ಪೂರೈಸುವುದು ಅನುಮಾನವಾಗಿದೆ.
ಅಕ್ಕಿ ವಿತರಿಸಲು ಪ್ರಯತ್ನಿಸಲಾಗುತ್ತಿದ್ದು, ಹೆಚ್ಚುವರಿ ಐದು ಕೆಜಿ ಅಕ್ಕಿ ಸಿಗದಿದ್ದರೆ ಅಕ್ಕಿ ಬದಲಿಗೆ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ಮುಂದಿನ ತಿಂಗಳು ಕೂಡ ಅಕ್ಕಿ ಲಭ್ಯವಾಗದ ಹಿನ್ನೆಲೆಯಲ್ಲಿ ಹಣ ನೀಡುವುದನ್ನು ಮುಂದುವರೆಸಲಾಗುವುದು. ಪಡಿತರದಲ್ಲಿ ಅಕ್ಕಿ ಜೊತೆಗೆ ನೀಡುತ್ತಿರುವ ಜೋಳ ಮತ್ತು ರಾಗಿಯ ಪ್ರಮಾಣ ಹೆಚ್ಚಳ ಮಾಡುವ ಕುರಿತು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ ಜೋಳ, ದಕ್ಷಿಣ ಕರ್ನಾಟಕದಲ್ಲಿ ರಾಗಿ ನೀಡಲಾಗುವುದು. ಅಕ್ಕಿ ಬಳಕೆ ಮಾಡದ ಕಡೆ ರಾಗಿ ಅಥವಾ ಜೋಳ ಪೂರೈಕೆ ಮಾಡುವ ಬಗ್ಗೆ ಚರ್ಚೆ ನಡೆದಿದ್ದು, ಅಧಿಕಾರಿಗಳು ವರದಿ ನೀಡಿದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.