
ನಾಳೆಯಿಂದ ಏಕದಿನ ಕ್ರಿಕೆಟ್ ವಿಶ್ವ ಕಪ್ ಪಂದ್ಯಾವಳಿಗಳು ಆರಂಭವಾಗಲಿದ್ದು, ಅದಕ್ಕೂ ಮುನ್ನ ಅಂದರೆ ಮಂಗಳವಾರ ರಾತ್ರಿ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಆಘಾತಕಾರಿ ಘಟನೆ ನಡೆದಿದೆ.
ಕೆಲ ಕಿಡಿಗೇಡಿಗಳು, ಧರ್ಮಶಾಲಾದ ಜಲ ಶಕ್ತಿ ಇಲಾಖೆಯ ಕಚೇರಿ ಕಟ್ಟಡದ ಮೇಲೆ ‘ಖಲಿಸ್ತಾನ್ ಜಿಂದಾಬಾದ್’ ಎಂಬ ಘೋಷಣೆ ಬರೆದಿದ್ದು, ಬುಧವಾರ ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ವ್ಯಾಪಕ ತನಿಖೆ ಆರಂಭಿಸಿದ್ದಾರೆ.
ಧರ್ಮಶಾಲಾದಲ್ಲಿ ಏಕದಿನ ವಿಶ್ವಕಪ್ ಕ್ರಿಕೆಟ್ ನ ಐದು ಪಂದ್ಯಗಳನ್ನು ನಡೆಸಲು ನಿಗದಿಯಾಗಿದ್ದು, ಇದರ ಮಧ್ಯೆ ನಡೆದಿರುವ ಈ ಬೆಳವಣಿಗೆ ಅಧಿಕಾರಿಗಳಿಗೆ ಆತಂಕ ತಂದಿದೆ. ಈ ಹಿನ್ನಲೆಯಲ್ಲಿ ಸಿಸಿ ಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ತೀವ್ರ ಕಾರ್ಯಾಚರಣೆ ನಡೆಸಲಾಗಿದೆ.