alex Certify BIG NEWS: 2024 ರಲ್ಲಿ ಬಿಜೆಪಿ ಎದುರಿಸಲು ಕಾಂಗ್ರೆಸ್ ನೇತೃತ್ವ: ಖರ್ಗೆ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 2024 ರಲ್ಲಿ ಬಿಜೆಪಿ ಎದುರಿಸಲು ಕಾಂಗ್ರೆಸ್ ನೇತೃತ್ವ: ಖರ್ಗೆ ಮಹತ್ವದ ಹೇಳಿಕೆ

ನವದೆಹಲಿ: ಪ್ರತಿಪಕ್ಷಗಳ ಒಗ್ಗಟ್ಟಿನ ಹೊಸ ಕರೆ ಹೊರಹೊಮ್ಮುತ್ತಿದ್ದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ತಮ್ಮ ಪಕ್ಷವು ದೇಶಕ್ಕೆ “ಸಮರ್ಥ ಮತ್ತು ನಿರ್ಣಾಯಕ” ನಾಯಕತ್ವವನ್ನು ನೀಡಬಲ್ಲದು ಎಂದು ಪ್ರತಿಪಾದಿಸಿದ್ದಾರೆ.

2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ನೇತೃತ್ವದ ಮೈತ್ರಿಗೆ ಬಲವಾಗಿ ಒತ್ತಾಯಿಸಿದ ಅವರು, ಜನವಿರೋಧಿ ಮತ್ತು ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ಸರ್ಕಾರವನ್ನು ತೊಡೆದುಹಾಕಲು ಕಾಂಗ್ರೆಸ್ ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಹೇಳಿದ್ದಾರೆ.

2004 ರಿಂದ 2014 ರವರೆಗಿನ ಪಕ್ಷದ ನೇತೃತ್ವದ ಮೈತ್ರಿ(ಯುಪಿಎ) ಪರಿಣಾಮಕಾರಿಯಾಗಿ ಜನರಿಗೆ ಸೇವೆ ಸಲ್ಲಿಸಿದೆ ಎಂದು ನೆನಪಿಸುವ ಮೂಲಕ ಸಮಾನ ಮನಸ್ಕ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ ಮತ್ತೊಮ್ಮೆ “ಕಾರ್ಯಸಾಧ್ಯವಾದ ಪರ್ಯಾಯ” ರೂಪಿಸಲು ಎದುರು ನೋಡುತ್ತಿದೆ ಎಂದು ಖರ್ಗೆ ಹೇಳಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರತಿಪಕ್ಷಗಳ ಒಗ್ಗಟ್ಟಿನ ಕುರಿತು ಕಾಂಗ್ರೆಸ್ ಶೀಘ್ರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದ ನಂತ ಖರ್ಗೆಯವರಿಂದ ಇಂತಹುದೊಂದು ಮಹತ್ವದ ಹೇಳಿಕೆ ಬಂದಿದೆ.

ಜೆಡಿಯು ಮುಖ್ಯಸ್ಥರಾಗಿರುವ ನಿತೀಶ್ ಕುಮಾರ್ ಅವರ ಪ್ರಕಾರ, 2024 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಹೋರಾಡಿದರೆ ಬಿಜೆಪಿ 100 ಕ್ಕಿಂತ ಕಡಿಮೆ ಸ್ಥಾನಗಳಿಗೆ ಸೀಮಿತವಾಗಿರುತ್ತದೆ.

ಛತ್ತೀಸ್‌ಗಢದ ನವ ರಾಯ್‌ಪುರದಲ್ಲಿ ಕಾಂಗ್ರೆಸ್‌ನ 85ನೇ ಸರ್ವಸದಸ್ಯರ ಅಧಿವೇಶನದಲ್ಲಿ ಚರ್ಚಿಸಲಾಗುತ್ತಿರುವ ಕರಡು ರಾಜಕೀಯ ನಿರ್ಣಯವು ಸಮಾನ ಮನಸ್ಕ ಜಾತ್ಯತೀತ ಶಕ್ತಿಗಳನ್ನು ಗುರುತಿಸಲು, ಸಜ್ಜುಗೊಳಿಸಲು ಮತ್ತು ಒಟ್ಟುಗೂಡಿಸಲು ಕಾಂಗ್ರೆಸ್ ಎಲ್ಲ ಪ್ರಯತ್ನಗಳನ್ನು ಮಾಡಬೇಕು. ಅದು ತನ್ನ ಸಿದ್ಧಾಂತವನ್ನು ಒಪ್ಪುವ ಜಾತ್ಯತೀತ ಪ್ರಾದೇಶಿಕ ಶಕ್ತಿಗಳನ್ನು ಒಳಗೊಂಡಿರಬೇಕು. ಸಾಮಾನ್ಯ ಸೈದ್ಧಾಂತಿಕ ಆಧಾರದ ಮೇಲೆ ಎನ್‌ಡಿಎಯನ್ನು ಎದುರಿಸಲು ಒಗ್ಗಟ್ಟಿನ ವಿರೋಧದ ತುರ್ತು ಅಗತ್ಯವಿದೆ ಎಂದು ಹೇಳಿದೆ.

ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ರಾಹುಲ್ ಗಾಂಧಿಯವರ ಇತ್ತೀಚಿನ ಭಾರತ್ ಜೋಡೋ ಯಾತ್ರೆಯು ಇಂದು ಜನರು ಎದುರಿಸುತ್ತಿರುವ ಅಭೂತಪೂರ್ವ ಸವಾಲುಗಳ ವಿರುದ್ಧ ಪ್ರಬಲ ಧ್ವನಿಯಾಗಿ ಹೊರಹೊಮ್ಮಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...