ಕಲಬುರಗಿ: ಲೋಕಸಭೆ ಚುನಾವಣೆಯಲ್ಲಿ ದೇಶದೆಲ್ಲೆಡೆ ಇಂಡಿಯಾ(ಐ.ಎನ್.ಡಿ.ಎ.ಐ.) ಮೈತ್ರಿಕೂಟದ ಕಡೆಗೆ ಹೆಚ್ಚಿನ ಒಲವು ಕಂಡುಬರುತ್ತಿದೆ. ಇಂಡಿಯಾ ಮೈತ್ರಿಕೂಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಲ್ಲಿ ಎಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗಲಿದ್ದಾರೆ.
ಹೀಗೆಂದು ಮುಖ್ಯಮಂತ್ರಿಗಳ ಸಲಹೆಗಾರ ಹಾಗೂ ಶಾಸಕ ಬಿ.ಆರ್. ಪಾಟೀಲ್ ಹೇಳಿದ್ದಾರೆ. ಆಳಂದದಲ್ಲಿ ಮಂಗಳವಾರ ಬೀದರ್ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಪರವಾಗಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಹತ್ತು ವರ್ಷಗಳಿಂದ ಆಡಳಿತ ನಡೆಸಿದ ಬಿಜೆಪಿ ಎಲ್ಲಾ ಹಂತಗಳಲ್ಲಿಯೂ ವಿಫಲವಾಗಿದೆ. ಪ್ರತಿ ಪಕ್ಷಗಳ ಮೇಲೆ ಸೇಡಿನ ರಾಜಕಾರಣ ಮಾಡುತ್ತಿದೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.
ದೇಶದಲ್ಲಿ ಕಾಂಗ್ರೆಸ್ ಮೈತ್ರಿಕೂಟದ ಪರ ಒಲವು ಕಂಡು ಬರುತ್ತಿದ್ದು, ಬಹುಮತ ಬಂದಲ್ಲಿ ಖರ್ಗೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದ್ದಾರೆ.