ನವದೆಹಲಿ: ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ.
ಅವರು ಶನಿವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು, ಕೋವಿಡ್-19 ನಿಂದ ಬಳಲುತ್ತಿರುವ ಕಾರಣ 75ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಸಮಾರಂಭದಲ್ಲಿ ಹಾಜರಾಗುವುದಿಲ್ಲ ಎಂದು ತಿಳಿಸಿದರು.
ಭಾರತದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವ ಪ್ರತಿಯೊಬ್ಬರಿಗೂ ಒಂದು ಐತಿಹಾಸಿಕ ಸಂದರ್ಭ ಮತ್ತು ಹೆಮ್ಮೆಯ ಕ್ಷಣವಾಗಿದೆ. ನಾನು 15 ಆಗಸ್ಟ್ 2022 ರಂದು ಸ್ವಾತಂತ್ರ್ಯ ದಿನದ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಲು ತುಂಬಾ ಉತ್ಸುಕನಾಗಿದ್ದೇನೆ ಮತ್ತು ಎದುರು ನೋಡುತ್ತಿದ್ದೇನೆ. ನಾನು ಬಯಸಿದಂತೆ ಆಗಿಲ್ಲ. ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 2022ರ ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸ್ಥಿತಿಯಲ್ಲಿ ನಾನಿಲ್ಲ ಎಂದು ಖರ್ಗೆ ಅವರು ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.