alex Certify BREAKING NEWS: ದೇಗುಲದಲ್ಲಿ ಕಾಲ್ತುಳಿತ; ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ದೇಗುಲದಲ್ಲಿ ಕಾಲ್ತುಳಿತ; ಮೂವರ ಸಾವು

ರಾಜಸ್ಥಾನದ ಸಿಕಾರ್ ಜಿಲ್ಲೆಯ ಖಟು ಶ್ಯಾಮ್ ಜಿ ದೇಗುಲದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಮೂವರು ಸಾವನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ 5:00 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಸಾವನ್ನಪ್ಪಿದವರ ಪೈಕಿ ಎಲ್ಲರೂ ಮಹಿಳೆಯರಾಗಿದ್ದಾರೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಜೈಪುರದ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

— ANI MP/CG/Rajasthan (@ANI_MP_CG_RJ) August 8, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...