ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ವತಿಯಿಂದ 98 ವಸತಿ ಯೋಜನೆ ಕೈಗೊಳ್ಳಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಕರ್ನಾಟಕ ಗೃಹ ಮಂಡಳಿಯಿಂದ 7275 ಕೋಟಿ ರೂಪಾಯಿ ವೆಚ್ಚದಲ್ಲಿ 98 ವಸತಿ ಯೋಜನೆ ಕೈಗೊಳ್ಳಲಾಗುವುದು. ರಾಜ್ಯದ ನಾನಾ ಕಡೆಗಳಲ್ಲಿ ಬಡಾವಣೆಗಳನ್ನು ನಿರ್ಮಿಸಲಿದ್ದು, ನಿವೇಶನ ಹಂಚಿಕೆ ಮಾಡಲಾಗುತ್ತದೆ. ಸುಮಾರು 1.13 ಲಕ್ಷ ನಿವೇಶನ ನಿರ್ಮಾಣ ಮಾಡಲಾಗುವುದು ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.