alex Certify ಆ. 23 ದೇಶದ ಮೊದಲ ನಾಲೆಡ್ಜ್, ಹೆಲ್ತ್ ಸಿಟಿ ಯೋಜನೆಗೆ ಚಾಲನೆ: ಎಂ.ಬಿ. ಪಾಟೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆ. 23 ದೇಶದ ಮೊದಲ ನಾಲೆಡ್ಜ್, ಹೆಲ್ತ್ ಸಿಟಿ ಯೋಜನೆಗೆ ಚಾಲನೆ: ಎಂ.ಬಿ. ಪಾಟೀಲ್

ಬೆಂಗಳೂರು: ದೇಶದ ಮೊದಲ ಮಹತ್ವಕಾಂಕ್ಷಿಯ ನಾಲೆಡ್ಜ್, ಹೆಲ್ತ್ ಇನೋವೇಷನ್ ಮತ್ತು ರಿಸರ್ಚ್ ಸಿಟಿ(ಕೆಹೆಚ್ಐಆರ್ ಸಿಟಿ) ಯೋಜನೆಯ ಮೊದಲ ಹಂತಕ್ಕೆ ಆಗಸ್ಟ್ 23 ರಂದು ಚಾಲನೆ ನೀಡಲಾಗುವುದು ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಿಂದ 60 ಕಿಲೋಮೀಟರ್ ದೂರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಒಟ್ಟು 2,000 ಎಕರೆ ಪ್ರದೇಶದಲ್ಲಿ ಕೆಹೆಚ್ಐಆರ್ ಸಿಟಿ ಅಭಿವೃದ್ಧಿಪಡಿಸಲಾಗುವುದು. ಮೊದಲ ಹಂತದಲ್ಲಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಯೋಜನೆ ಕಾರ್ಯರೂಪಕ್ಕೆ ಬರಲಿದೆ. ಒಟ್ಟು ಎರಡು ಹಂತಗಳಲ್ಲಿ 40,000 ಕೋಟಿಗಿಂತಲೂ ಹೆಚ್ಚು ಹೂಡಿಕೆಯಾಗಲಿದ್ದು, 50,000 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ತಿಳಿಸಿದ್ದಾರೆ.

ಕೆಹೆಚ್ಐಆರ್ ಸಿಟಿಯಲ್ಲಿ ನಾಲ್ಕು ವಲಯಗಳಲ್ಲಿನ ಜಾಗತಿಕ ಮಟ್ಟದ ಅತ್ಯುನ್ನತ ಕಂಪನಿಗಳು ನೆಲೆಯೂರಲಿವೆ. ಇದಕ್ಕೆ ಬೇಕಾದ ಜಮೀನು, ವಿದ್ಯುತ್, ನೀರು, ರಸ್ತೆ ಮೊದಲಾದ ಸೌಲಭ್ಯಗಳನ್ನು ರಾಜ್ಯ ಸರ್ಕಾರ ಒದಗಿಸಲಿದ್ದು, ಇದರಿಂದ ಆರ್ಥಿಕ ವರಮಾನ ಹೆಚ್ಚಳದ ಜೊತೆಗೆ ರಫ್ತು ವಹಿವಾಟು ಕೂಡ ಹೆಚ್ಚಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಆಗಸ್ಟ್ 23 ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಸಮಾರಂಭದಲ್ಲಿ ಕೆಹೆಚ್ಐಆರ್ ಸಿಟಿಗೆ ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉದ್ಯಮ ವಲಯದ ಪ್ರಮುಖರು ಸೇರಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...