ಬೆಂಗಳೂರು: ಖೋ ಖೋ ವಿಶ್ವಕಪ್ ಗೆದ್ದ ಭಾರತ ಪುರುಷರ ಮತ್ತು ಮಹಿಳಾ ತಂಡದಲ್ಲಿದ್ದ ಕರ್ನಾಟಕದ ಎಂ.ಕೆ. ಗೌತಮ್ ಹಾಗೂ ಚೈತ್ರಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದ 5 ಲಕ್ಷ ರೂಪಾಯಿ ಬಹುಮಾನ ತಿರಸ್ಕರಿಸುವುದಾಗಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಶನಿವಾರ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಗೌತಮ್ ಮತ್ತು ಚೈತ್ರಾ ಅವರು ಖೋ ಖೋ ಆಟಕ್ಕೆ ನಮ್ಮ ಸರ್ಕಾರದ ಕಡೆಯಿಂದ ಸರಿಯಾದ ಸ್ಪಂದನೆ ಸಿಗುತ್ತಿಲ್ಲ ಎಂದು ದೂರಿದ್ದಾರೆ.
ನಾವು ಮೊದಲ ಬಾರಿಗೆ ವಿಶ್ವಕಪ್ ಗೆದ್ದು ಬಂದ ನಂತರ ಸಿಎಂ ಕೇವಲ 5 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ. ಮಹಾರಾಷ್ಟ್ರ, ಉತ್ತರ ಪ್ರದೇಶದಲ್ಲಿ ಆಟಗಾರರಿಗೆ ದೊಡ್ಡ ಮೊತ್ತದ ಬಹುಮಾನ ಘೋಷಿಸುವ ಜೊತೆಗೆ ಎ ದರ್ಜೆಯ ಸರ್ಕಾರಿ ಹುದ್ದೆಯ ಭರವಸೆ ನೀಡಲಾಗಿದೆ. ನಮಗೆ ಆ ರೀತಿಯ ಯಾವ ಸೌಲಭ್ಯ ಕೊಡದೆ ಇರುವುದು ಬೇಸರ ತಂದಿದೆ ಎಂದು ಹೇಳಿದ್ದಾರೆ.