ಮೈಸೂರು: ಖೋಖೋ ಆಟವಾಡುತ್ತಿದ್ದ ವೇಳೆ ವಿದ್ಯಾರ್ಥಿ ಗಾಯಗೊಂಡು ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
ಶಾಲೆಯ ಆವರಣದಲ್ಲಿ ಖೋಖೋ ಆಟವಾಡುತ್ತಿದ್ದ 9ನೇ ತರಗತಿ ವಿದ್ಯಾರ್ಥಿ ಶಶಾಂಕ್(15) ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ತರಬೇತಿ ವೇಳೆ ಆಟದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ವಿದ್ಯಾರ್ಥಿ ಜೋರಾಗಿ ಓಡುವ ವೇಳೆ ಆತನ ಮಂಡಿ ಶಶಾಂಕ್ ಕೆನ್ನೆಗೆ ಬಡಿದ ಪರಿಣಾಮ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಕೂಡಲೇ ಶಶಾಂಕ್ ನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.