ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 23 ಕೋಟಿ ರೂ.ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಬ್ಯಾಂಕಾಕ್ ನಿಂದ ಬೆಂಗಳೂರಿನ ಏರ್ ಪೋರ್ಟ್ ಗೆ ಆಗಮಿಸಿದ್ದ ಮೂವರು ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ 23 ಕೆಜಿಯ ಹೈಡ್ರೋಪೋನಿಕ್ಸ್, ಮೈರವಾನ್ ಹಾಗೂ ಹೂ ಸೇರಿದಂತೆ ವಿವಿಧ ಬಗೆಯ ಗಾಂಜಾಗಳು ಪತ್ತೆಯಾಗಿವೆ. ಪ್ರತ್ಯೇಕ ಕವರ್ ಗಳಲ್ಲಿ ಪ್ಯಾಕಿಂಗ್ ಮಾಡಿಕೊಂಡು ಲಗೇಜ್ ಬ್ಯಾಗ್ ನಲ್ಲಿ ಇಟ್ಟುಕೊಂಡು ಕೆಐಎ ಏರ್ ಪೋರ್ಟ್ ಗೆ ಬಂದಿದ್ದರು.
ಈ ವೇಳೆ ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಸಿಕ್ಕಿಬಿದ್ದಿದ್ದಾರೆ. ಗಾಂಜಾ ಸಮೇತ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. 23 ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ.