
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 52 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಅಕ್ರಮವಾಗಿ ವಿದೇಶದಿಂದ ಸಾಗಿಸುತ್ತಿದ್ದ 731 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಬ್ಯಾಂಕಾಕ್, ದಮ್ಮಾಮ್ ಹಾಗೂ ದುಬೈನಿಂದ ಚಿನ್ನವನ್ನು ತಂದಿದ್ದ ಮೂವರು ಪ್ರಯಾಣಿಕರನ್ನು ವಶಕ್ಕೆ ಪಡೆಯಲಾಗಿದೆ.
ಬಿಸ್ಕೆಟ್ ಹಾಗೂ ಆಭರಣಗಳ ಮಾದರಿಯಲ್ಲಿ ಚಿನ್ನವನ್ನು ತಂದಿದ್ದರು. ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವ ಬಗ್ಗೆ ಬಾಯಿಬಿಟ್ಟಿದ್ದಾರೆ. ಮೂವರನ್ನು ಬಂಧಿಸಿದ ಅಧಿಕಾರಿಗಳು 52 ಲಕ್ಷ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ