ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಳೆದ 5 ದಿನಗಳಲ್ಲಿ ಬರೋಬ್ಬರಿ 2 ಕೋಟಿ ಮೌಲ್ಯದ ಅಕ್ರಮ ಚಿನ್ನ ವಶಕ್ಕೆ ಪಡೆದಿದ್ದಾರೆ.
ಕೆಐಎ ಗೆ ಆಗಮಿಸಿದ 15 ಅಂತರಾಷ್ಟ್ರೀಯ ಪ್ರಯಾಣಿಕರಿಂದ ಎರಡು ಕೋಟಿ ಮೌಲ್ಯದ 3.31 ಕೆಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಪ್ರಯಾಣಿಕರು ಬಟ್ಟೆಯಲ್ಲಿ ಚಿನ್ನವನ್ನು ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದರು.
ಕೌಲಾಲಂಪುರ, ಜೆಡ್ವಾ, ಶಾರ್ಜಾ ಹಾಗೂ ಬ್ಯಾಂಕಾಕ್ ನಿಂದ ಬಂದಿದ್ದ ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಬಯಲಾಗಿದೆ. ವಶಕ್ಕೆ ಪಡೆದಿರುವ ಪ್ರಯಾಣಿಕರಲ್ಲಿ 10 ಜನರು ಮಹಿಳೆಯರು ಸೇರಿದ್ದಾರೆ ಎಂದು ತಿಳಿದುಬಂದಿದೆ.