ಬೆಂಗಳೂರು: ಕೆಐಎಎಡಿಬಿ ಭೂ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರಿಗೆ ಸಂಕಷ್ಟ ಎದುರಾಗಿದೆ.
ಬೆಂಗಳೂರು ಉತ್ತರ ಜಾಲ ಹೋಬಳಿಯ ಹೂವಿನಾಯಕನಹಳ್ಳಿಯಲ್ಲಿ ಸುಮಾರು 20 ಎಕರೆ ಕೆಐಎಎಡಿಬಿ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಮತ್ತು ಕಟ್ಟಾ ಸುಬ್ರಹ್ಮಣ್ಯನಾಯ್ಡು ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿದ್ದಾರೆ.
2012 ರಲ್ಲಿ ಸಲ್ಲಿಕೆಯಾಗಿದ್ದ ದೋಷಾರೋಪ ಪಟ್ಟಿಯ ಅನ್ವಯ ಕ್ರಮಕೈಗೊಳ್ಳಲು ಲೋಕಾಯುಕ್ತ ವಿಶೇಷ ಕೋರ್ಟ್ ಹೈಕೋರ್ಟ್ ಸೂಚನೆ ನೀಡಿದೆ. ಕೆಐಎಡಿಬಿ ಭೂ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಿಂದ ಕೈಬಿಟ್ಟ ಲೋಕಾಯುಕ್ತ ಕೋರ್ಟ್ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಚಾರ್ಜ್ ಶೀಟ್ ಆಧರಿಸಿ ಕ್ರಮ ಜರುಗಿಸುವಂತೆ ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಅವರ ಪೀಠ ಆದೇಶ ಹೊರಡಿಸಿದೆ ಎಂದು ಹೇಳಲಾಗಿದೆ.