alex Certify ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಚಿತ್ರದ ಟೀಸರ್ ರಿಲೀಸ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ‘ಮ್ಯಾಕ್ಸ್’ ಚಿತ್ರದ ಟೀಸರ್ ಇಂದು ಸರಿಗಮ ಕನ್ನಡ ಯೂಟ್ಯೂಬ್ ಚಾನೆಲ್ ನಲ್ಲಿ  ಬಿಡುಗಡೆಯಾಗಿದೆ. ಈ ಟೀಸರ್ ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ.

ವಿಜಯ್ ಕಾರ್ತಿಕೇಯ ನಿರ್ದೇಶನದ ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಸಂಯುಕ್ತ  ಹೊರನಾಡು, ಸುನಿಲ್, ವರಲಕ್ಷ್ಮಿ ಶರತಕುಮಾರ್, ಪ್ರಮೋದ್ ಶೆಟ್ಟಿ, ಅನಿರುದ್ಧ ಭಟ್, ಹಾಗೂ ಸುಕೃತ ವಾಗ್ಲೆ ಉಳಿದ ಪಾತ್ರವರ್ಗದಲ್ಲಿದ್ದಾರೆ. ವಿ ಕ್ರಿಯೇಶನ್ಸ್ ಹಾಗೂ ಕಿಚ್ಚ ಕ್ರಿಯೇಶನ್ಸ್ ನಿರ್ಮಾಣ ಮಾಡಿದ್ದು, ಎಸ್ ಆರ್ ಗಣೇಶ್ ಬಾಬು ಸಂಕಲನ, ಪೆರುಮಾಳ್ ಸೆಲ್ವಮ್ ವೇಷಭೂಷಣ, ಹಾಗೂ ಶೇಖರ್ಚಂದ್ರ ಛಾಯಾಗ್ರಹಣವಿದೆ. ಬಿ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...