alex Certify BIG NEWS : ಕಿಚ್ಚ ಸುದೀಪ್ ವಿರುದ್ಧ ಯಾವುದೇ ಆರೋಪ ಮಾಡಿಲ್ಲ, ದೂರು ನೀಡಿಲ್ಲ : ನಿರ್ಮಾಪಕ ಕುಮಾರ್ ಯೂ ಟರ್ನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕಿಚ್ಚ ಸುದೀಪ್ ವಿರುದ್ಧ ಯಾವುದೇ ಆರೋಪ ಮಾಡಿಲ್ಲ, ದೂರು ನೀಡಿಲ್ಲ : ನಿರ್ಮಾಪಕ ಕುಮಾರ್ ಯೂ ಟರ್ನ್

ಬೆಂಗಳೂರು : ನಾನು ನಟ ಕಿಚ್ಚ ಸುದೀಪ್ ವಿರುದ್ಧ ಯಾವುದೇ ಆರೋಪ ಮಾಡಿಲ್ಲ, ದೂರು ನೀಡಿಲ್ಲ ಎಂದು ನಿರ್ಮಾಪಕ ಕುಮಾರ್ ಯೂ ಟರ್ನ್ ಹೊಡೆದಿದ್ದಾರೆ.

ಹಣಕಾಸು ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ನಿರ್ಮಾಪಕರ ಕುಮಾರ್ ವಿರುದ್ಧ ಕಿಚ್ಚ ಸುದೀಪ್ ಮಾನನಷ್ಟ ಮೊಕದ್ದಮೆ ಹೂಡಿದ್ದು, ಬೆಂಗಳೂರಿನ ಜೆಎಂಎಫ್ ಸಿ ಕೋರ್ಟ್ ಅರ್ಜಿ ಸ್ವೀಕರಿಸಿ ವಿಚಾರಣೆ ಆಗಸ್ಟ್ 17 ಕ್ಕೆ ಮುಂದೂಡಿದೆ. ಈ ಬೆನ್ನಲ್ಲೇ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ನಿರ್ಮಾಪಕ ಕುಮಾರ್ ನು ಸುದೀಪ್ ವಿರುದ್ಧ ದೂರು ನೀಡಿಲ್ಲ, ಯಾವುದೇ ಆರೋಪ ಮಾಡಿಲ್ಲ” ಎಂದಿದ್ದಾರೆ.

ನಾನು ನೀಡಿರುವುದು ದೂರು ಅಲ್ಲ ಅದು ಮನವಿಪತ್ರವಷ್ಟೇ, ಯಾವುದೇ ದೂರು ನೀಡಿಲ್ಲ, ಸಮಸ್ಯೆ ಬಗೆಹರಿಸಿಕೊಳ್ಳಲು ಸುದೀಪ್ ಅವರನ್ನು ಹುಡುಕಿಕೊಂಡು ಹೋದರೆ ಅವರು ಇಲ್ಲವೆಂದು ಹೇಳುತ್ತಿದ್ದರು. ಸುದೀಪ್ರ ಮ್ಯಾನೇಜರ್ ನನಗೆ ಸರಿಯಾಗಿ ಸ್ಪಂದಿಸುತ್ತಿರಲಿಲ್ಲ, ಹಾಗಾಗಿ ನಾನು ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿಪತ್ರ ನೀಡಿದೆ” ಎಂದು ಕುಮಾರ್ ಹೇಳಿದ್ದಾರೆ. ಕೋರ್ಟ್ ನೋಟಿಸ್ ಬಂದರೆ ಫಿಲ್ಮ್ ಚೇಂಬರ್ಗೆ ತಂದು ಕೊಡುತ್ತೇನೆ, ವಾಣಿಜ್ಯ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು ಹೇಳಿದಂತೆ ನಡೆಯುವೆ” ಎಂದಿದ್ದಾರೆ.
ಕೋರ್ಟ್ ಆವರಣದಲ್ಲಿ ಮಾತನಾಡಿದ ನಟ ಸುದೀಪ್ ‘ ಕಾನೂನು ವ್ಯಾಪ್ತಿಯಲ್ಲಿ ಎಲ್ಲದಕ್ಕೂ ಉತ್ತರ ನೀಡುತ್ತೇನೆ, ಕರ್ನಾಟಕ ವಾಣಿಜ್ಯ ಮಂಡಳಿ ನನಗೆ ತಾಯಿ ಸಮಾನ, ನನ್ನ ವಿರುದ್ಧದ ಆರೋಪಕ್ಕೆ ಲೀಗಲ್ ನೋಟಿಸ್ ಕೊಟ್ಟಿದ್ದೇನೆ. ಆದರೆ ಅವರು ಉತ್ತರ ಕೊಡಲಿಲ್ಲ. ಅದಕ್ಕೆ ಕೋರ್ಟ್ ಗೆ ಬಂದಿದ್ದೇನೆ ಎಂದರು. ಬಾಯಿ ಇದೆ ಎಂದು ಬೇಕಾಬಿಟ್ಟಿ ಮಾತನಾಡುವುದಲ್ಲ, ಎಲ್ಲಾ ಆರೋಪಗಳಿಗೂ ಕಾನೂನು ವ್ಯಾಪ್ತಿಯಲ್ಲಿ ತಕ್ಕ ಉತ್ತರ ನೀಡಲಿದ್ದೇನೆ ಎಂದರು.

ಸುದೀಪ್ ಕೋರ್ಟ್ ಮೆಟ್ಟಿಲು ಹತ್ತುತ್ತಿದ್ದಂತೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕುಮಾರ್ ‘ನಟ ಕಿಚ್ಚ ಸುದೀಪ್ ವಿರುದ್ಧ ಯಾವುದೇ ಆರೋಪ ಮಾಡಿಲ್ಲ, ದೂರು ನೀಡಿಲ್ಲ ಎಂದು ನಿರ್ಮಾಪಕ ಕುಮಾರ್ ಯೂ ಟರ್ನ್ ಹೊಡೆದಿದ್ದಾರೆ.

ಮಾನನಷ್ಟ ಮೊಕದ್ದಮೆ ಹೂಡುವ ಸಂಬಂಧ ಸುದೀಪ್ ಅರ್ಜಿ ಸ್ವೀಕರಿಸಿದ ಕೋರ್ಟ್ ಆಗಸ್ಟ್ 17 ಕ್ಕೆ ವಿಚಾರಣೆ ಮುಂದೂಡಿದೆ. ನಂತರ ಕೋರ್ಟ್ ಆವರಣದಲ್ಲಿ ಮಾತನಾಡಿದ ನಟ ಸುದೀಪ್ ‘ ಕಾನೂನು ವ್ಯಾಪ್ತಿಯಲ್ಲಿ ಎಲ್ಲದಕ್ಕೂ ಉತ್ತರ ನೀಡುತ್ತೇನೆ, ಕರ್ನಾಟಕ ವಾಣಿಜ್ಯ ಮಂಡಳಿ ನನಗೆ ತಾಯಿ ಸಮಾನ, ನನ್ನ ವಿರುದ್ಧದ ಆರೋಪಕ್ಕೆ ಲೀಗಲ್ ನೋಟಿಸ್ ಕೊಟ್ಟಿದ್ದೇನೆ. ಆದರೆ ಅವರು ಉತ್ತರ ಕೊಡಲಿಲ್ಲ. ಅದಕ್ಕೆ ಕೋರ್ಟ್ ಗೆ ಬಂದಿದ್ದೇನೆ ಎಂದರು. ಬಾಯಿ ಇದೆ ಎಂದು ಬೇಕಾಬಿಟ್ಟಿ ಮಾತನಾಡುವುದಲ್ಲ, ಎಲ್ಲಾ ಆರೋಪಗಳಿಗೂ ಕಾನೂನು ವ್ಯಾಪ್ತಿಯಲ್ಲಿ ತಕ್ಕ ಉತ್ತರ ನೀಡಲಿದ್ದೇನೆ ಎಂದರು. ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸುದೀಪ್ ಹಾಗೂ ಕುಮಾರ್ ನಡುವೆ ಜಟಾಪಟಿ ನಡೆಯುತ್ತಿದೆ. ಚಿತ್ರಕ್ಕಾಗಿ ಮುಂಗಡವಾಗಿ ಹಣ ಪಡೆದು ಸಿನಿಮಾ ಮಾಡಿಲ್ಲ ಎಂದು ಎಂ ಎನ್ ಕುಮಾರ್ ಮತ್ತು ರೆಹಮಾನ್ ಆರೋಪ ಮಾಡಿದ್ದಾರೆ.

ಸ್ಯಾಂಡಲ್ ವುಡ್ ನಿರ್ಮಾಪಕ ಎಂ ಎನ್ ಕುಮಾರ್ ಮಾಡಿದ ಆರೋಪಗಳಿಗೆ ಇತ್ತೀಚೆಗೆ ನಟ ಕಿಚ್ಚ ಸುದೀಪ್ ಉತ್ತರ ನೀಡಿದ್ದರು.ಕುಮಾರ್ ಮಾಡಿದ ಆರೋಪಕ್ಕೆ ಉತ್ತರ ನೀಡಿದ ಸುದೀಪ್ 10 ಕೋಟಿ ರೂs ಪರಿಹಾರ ನೀಡುವಂತೆ ನೋಟಿಸ್ ಕಳುಹಿಸಿದ್ದರು. ಹಾಗೆಯೇ ಕ್ರಿಮಿನಲ್ ಕೇಸ್ ಕೂಡ ದಾಖಲಿಸಿದ್ದಾರೆ. ಸುದೀಪ್ ಕನ್ನಡ ಚಿತ್ರರಂಗದಲ್ಲಿ 20 ವರ್ಷದಿಂದ ನಟಿಸುತ್ತಿದ್ದಾರೆ, ಸಮಾಜ ಸೇವೆಯ ಮೂಲಕ ಹಲವರಿಗೂ ಮಾದರಿಯಾಗಿದ್ದಾರೆ, ನೀವು ಮಾಡಿರುವ ಆರೋಪ ಸುಳ್ಳಾಗಿದ್ದು, ಮಾನಹಾನಿ ಉಂಟು ಮಾಡಿದ್ದೀರಾ..? ನೀವು ಕ್ಷಮೆಯಾಚಿಸಬೇಕು ಹಾಗೂ ಪರಿಹಾರ ನೀಡಬೇಕು ಎಂದು ಸುದೀಪ್ ಪರ ವಕೀಲರು ಲೀಗಲ್ ನೋಟಿಸ್ ನೀಡಿದ್ದರು. ಸುದ್ದಿಗೋಷ್ಟಿಯಲ್ಲಿ ಅಧಾರ ರಹಿತ ಆರೋಪ ಮಾಡಿದ್ದಾರೆ. ಆದ್ದರಿಂದ ಮಾಧ್ಯಮಗಳ ಮೂಲಕ ಕ್ಷಮೆಯಾಚಿಸಬೇಕೆಂದು ನೋಟಿಸ್ ನಲ್ಲಿ ತಾಕೀತು ಮಾಡಿದ್ದರು. ಕೆಲವು ದಿನಗಳ ಹಿಂದೆ ಸುದ್ದಿಗೋಷ್ಟಿ ನಡೆಸಿದ ಕುಮಾರ್ ಕಿಚ್ಚ ಸುದೀಪ್ ಗೆ ಒಂದು ಸಿನಿಮಾದ ಅಡ್ವಾನ್ಸ್ ಕೊಟ್ಟಿದ್ದೇನೆ, ಆದರೆ ಅವರು ಕೈಗೆ ಸಿಗುತ್ತಿಲ್ಲ. ಹಣಕೊಟ್ಟು ಬೇಡುವ ಸ್ಥಿತಿಬಂದಿದೆ ಎಂದು ಕುಮಾರ್ ವಾಣಿಜ್ಯ ಮಂಡಳಿಗೆ ಪತ್ರ ಸಲ್ಲಿಸಿದ್ದರು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...