ಬೆಳಗಾವಿ: ಬಾಲಕಿ ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬೆಳಗಾವಿಯ ಕ್ಯಾಂಪ್ ಠಾಣೆ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಾಲಕಿ ಪುಸಲಾಯಿಸಿ ಗುಜರಾತ್ ಗೆ ಕರೆದೊಯ್ದು ಆರೋಪಿ ಲೈಂಗಿಕ ದೌರ್ಜನ್ಯ ಎಸರಿದ್ದಾನೆ. ಕಳೆದ ನಾಲ್ಕು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮೇಲೆ ಎರಡು ದಿನ ಕಾಲ ಆರೋಪಿ ಲೈಂಗಿಕ ದೌರ್ಜನ್ಯ ಎಸೆಗಿದ್ದಾನೆ.
ಅಹಮದಾಬಾದ್ ನ ಸಂಬಂಧಿಕರ ಮನೆಯಲ್ಲಿ ಕೃತ್ಯವೆಸಗಿದ್ದಾನೆ. ಬೆಳಗಾವಿಯ ಖಾಸಗಿ ಕಾಲೇಜಿನಲ್ಲಿ ಬಾಲಕಿ ವ್ಯಾಸಂಗ ಮಾಡುತ್ತಿದ್ದಳು. ಸಂತ್ರಸ್ಥೆಯ ತಂದೆ ಕ್ಯಾಂಪ್ ಪೋಲಿಸ್ ಠಾಣೆಗೆ ದೂರು ನೀಡಿದ್ದರು. ಬೆಳಗಾವಿಯಲ್ಲಿ ವಾಸವಾಗಿದ್ದ ಗುಜರಾತ್ ಮೂಲದ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕ್ಯಾಂಪ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.