ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಎಸ್ಐಟಿಯಿಂದ ಬಂಧಿಸಲ್ಪಟ್ಟಿರುವ ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣ ಜಾಮೀನು ಕೋರಿ ಮತ್ತೆ ಕೋರ್ಟ್ ಮೆಟ್ಟಿಲೇರಿದ್ದಾರೆ.
ಹೆಚ್.ಡಿ.ರೇವಣ್ಣಗೆ ಜಾಮೀನು ನೀಡುವಂತೆ ಕೋರಿ ರೇವಣ್ಣ ಪರ ವಕೀಲರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಮಹಿಳೆಯ ಕಿಡ್ನ್ಯಾಪ್ ಕೇಸ್ ನಲ್ಲಿ ಬಂಧನ ಭೀತಿಯಲ್ಲಿದ್ದ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಹೆಚ್.ಡಿ.ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ರೇವಣ್ಣ ಬಂಧನ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ಮುಕ್ತಾಯಗೊಳಿಸಿತ್ತು.
ಇದೀಗ ಹೆಚ್.ಡಿ.ರೇವಣ್ಣ ಜಾಮೀನು ಕೋರಿ ಮತ್ತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.